ಪ್ರಧಾನಿ ಮೋದಿ 
ದೇಶ

ಅಹ್ಮದಾಬಾದ್ ಕೋವಿಡ್-19 ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ

ಅಹ್ಮದಾಬಾದ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ರೂ.2ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

ನವದೆಹಲಿ: ಅಹ್ಮದಾಬಾದ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ರೂ.2ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಟಿರುವ ಅವರು, ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ, ಘಟನೆ ಕುರಿತು ಮುಖ್ಯಮಂತ್ರಿಗಳು ಹಾಗೂ ಮೇಯರ್ ಜೊತೆಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದವರಿಗೆ ಅಗತ್ಯ ಸಹಾಯಗಳನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಅಲ್ಲದೆ, ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್