ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ 56,282 ಕೇಸ್ ಪತ್ತೆ, 20 ಲಕ್ಷ ಸನಿಹದತ್ತ ಸೋಂಕು, 40,000 ದಾಟಿದ ಸಾವಿನ ಸಂಖ್ಯೆ

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 56,282 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 56,282 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
 
ಈ ನಡುವೆ ಕಳೆದ 24 ಗಂಟೆಗಳಲ್ಲಿ 904 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 40,699ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. 

ಇನ್ನು 19,64,537 ಮಂದಿ ಸೋಂಕಿತರ ಪೈಕಿ 13,28,337 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 5,95,501 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಈ ಪೈಕಿ ಮಹಾರಾಷ್ಟ್ರದಲ್ಲಿ 10,309 ಮಂದಿಗೆ ಸೋಂಕು ತಟ್ಟಿದ್ದು, ಅಲ್ಲಿ ಸೋಂಕಿತರ ಸಂಖ್ಯೆ 4.68 ಲಕ್ಷಕ್ಕೇರಿದೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ 10,128, ಕರ್ನಾಟಕದಲ್ಲಿ 5,619, ತಮಿಳುನಾಡಿನಲ್ಲಿ 5,175 ಹಾಗೂ ಉತ್ತರಪ್ರದೇಶದಲ್ಲಿ 4,078 ಪ್ರಕರಣಗಳು ಬೆಳಕಿಗೆ ಬಂದಿವೆ. ಬುಧವಾರ ದೇಶದಲ್ಲಿ 902 ಮಂದಿ ಬಲಿಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್