ದೇಶ

ಉತ್ತರ ಪ್ರದೇಶದಲ್ಲಿ ಮರ್ಯಾದಾ ಹತ್ಯೆ! ಕುಟುಂಬ ಸದಸ್ಯರಿಂದಲೇ ಪ್ರೇಮಿಗಳ ಸಜೀವ ದಹನ

19 ವರ್ಷದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಯುವತಿಯ ಕುಟುಂಬಸದಸ್ಯರೇ ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿರುವ ಈ ಪ್ರಕರಣದ ತನಿಖೆ ನಡೆಯುತ್ತಿದೆ.

ಬಂಡಾ(ಉತ್ತರಪ್ರದೇಶ): 19 ವರ್ಷದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಯುವತಿಯ ಕುಟುಂಬಸದಸ್ಯರೇ ಸಜೀವ ದಹನ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿರುವ ಈ ಪ್ರಕರಣದ ತನಿಖೆ ನಡೆಯುತ್ತಿದೆ.

ಬಂಡಾ ಜಿಲ್ಲೆ ಮಾತೌಂಡ್ ಪ್ರದೇಶದ ಕಾರ್ಚಾ ಗ್ರಾಮದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕುಟುಂಬ ಸದಸ್ಯರು ಯುವ ಜೋಡಿಯನ್ನು ರಾಜಿ ಮಾಡಿಸುವುದಾಗಿ ಕರೆಸಿದ್ದರು.  ಆದರೆ ರಾಜಿ ಸಂಧಾನ ಸಾಧ್ಯವಾಗದ ಹಿನ್ನೆಲೆಯಲ್ಲಿ ಇಬ್ಬರನ್ನೂ ಗುಡಿಸಿಲೊಂದರಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲ್ಲಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಂದ್ರ ಪ್ರತಾಪ್ ಸಿಂಗ್ ಹೇಳಿದ್ದಾರೆ.

ತಕ್ಷಣವೇ ಬೆಂಕಿಯಲ್ಲಿ ಸುಟ್ಟು ಗಂಬೀರ ಸ್ಥಿತಿಯಲ್ಲಿದ್ದ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಭೋಲಾ (23) ಸಾವನ್ನಪ್ಪಿದ್ದಾನೆ. ಆದರೆ ಶೇ. 80 ರಷ್ಟು ಸುಟ್ಟಗಾಯಗಳಿಗೆ ತುತ್ತಾಗಿದ್ದ ಯುವತಿ ಪ್ರಿಯಾಂಕಾಳನ್ನು  ಕಾನ್ಪುರದ ಮತ್ತೊಂದು ಆಸ್ಪತ್ರೆಗೆ ಸಾಗಿಸುವಾಗ ಆಕೆ ಸಾವನ್ನಪ್ಪಿದ್ದಾಳೆ. 

ಸಧ್ಯ ಯುವತಿಯ ಕುಟುಂಬದ ಒಂಬತ್ತು ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇತರ ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸಿಂಗ್ ಹೇಳಿದರು.

ಶವಗಳ ಮರಣೋತ್ತರ ಪರೀಕ್ಷೆ ಗುರುವಾರ ನಡೆಯಲಿದೆ ಎಂದು ಪೋಲೀಸ್ ಮೂಲಗಳು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT