ದೇಶ

ಕೇರಳದ ಕಲ್ಲಿಕೋಟೆಯಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಮೃತರ ಸಂಖ್ಯೆ 19ಕ್ಕೇರಿಕೆ, ಹಲವರ ಸ್ಥಿತಿ ಗಂಭೀರ 

Srinivas Rao BV

ಕೊಚ್ಚಿ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ  ರನ್‌ವೇಯಿಂದ ಜಾರಿ ಉಂಟಾದ ಅಪಘಾತದಲ್ಲಿ ಇಬ್ಬರು ಪೈಲಟ್ ಗಳು ಸೇರಿ ಇದುವರೆಗೆ 19 ಮಂದಿ ಮೃತಪಟ್ಟಿದ್ದಾರೆ.
 

ಕೋವಿಡ್-19 ಸಾಂಕ್ರಾಮಿಕ ಮಧ್ಯದಲ್ಲಿ ಕೇಂದ್ರ ಸರ್ಕಾರದ ವಂದೇ ಭಾರತ್ ಕಾರ್ಯಕ್ರಮದಡಿಯಲ್ಲಿ ವಿದೇಶದಲ್ಲಿರುವ ಭಾರತೀಯರನ್ನು ಕರೆತರುವ ಭಾಗವಾಗಿ ಐಎಕ್ಸ್-1344, ಬಿ 737 ದುಬೈಯಿಂದ ಕಲ್ಲಿಕೋಟೆಗೆ ವಿಮಾನ ಆಗಮಿಸಿತ್ತು. ಒಟ್ಟು 190 ಪ್ರಯಾಣಿಕರು ವಿಮಾನದಲ್ಲಿದ್ದರು. 

ಮಂಗಳೂರಿನಲ್ಲಿ ನಡೆದಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಪತನದ ಮಾದರಿಯಲ್ಲಿ ಈ ಘಟನೆ ನಡೆದಿದೆ. ನಾಗರಿಕ ವಿಮಾನಯಾನದ ಪ್ರಧಾನ ನಿರ್ದೇಶನಾಲಯ ಈ ಘಟನೆ ಸಂಬಂಧ ತನಿಖೆಗೆ ಆದೇಶಸಿದೆ. 

2019 ರಲ್ಲೇ ಈ ರನ್ ವೇ ಯಲ್ಲಿರುವ ಸಮಸ್ಯೆಯ ಬಗ್ಗೆ ಡಿಜಿಸಿಎ ಎಚ್ಚರಿಕೆ ನೀಡಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚಿನ ವರದಿಯ ಪ್ರಕಾರ 40 ಕ್ಕೂ ಹೆಚ್ಚು  ಜನರು ತೀವ್ರವಾಗಿ ಗಾಯಗೊಂಡಿದ್ದು ರಕ್ಷಣಾ ಕಾರ್ಯ ಚುರುಕು ಪಡೆದುಕೊಂಡಿದೆ. ಕೇರಳ ಸರ್ಕಾರ 04832719493  ಸಹಾಯವಾಣಿಯನ್ನು ಪ್ರಾರಂಭಿಸಿದೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಕೇರಳದ ವಿಮಾನ ದುರಂತದಲ್ಲಿ ಉಂಟಾಗಿರುವ ಸಾವು-ನೋವುಗಳಿಂದ ದುಃಖವಾಗಿದೆ ಎಂದು ಹೇಳಿದ್ದಾರೆ. 

We are deeply saddened by the tragedy of Air India Express Flight No IX 1344 at Kozhikode.

MEA helplines are open 24x7:

1800 118 797
+91 11 23012113
+91 11 23014104
+91 11 23017905
Fax: +91 11 23018158
Email: covid19@mea.gov.in

ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಖಾತೆಯ ರಾಜ್ಯ ಸಚಿವ ವಿ.ಮುರಳೀಧರನ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ ಗೆ ತೆರಳುವ ಎಲ್ಲಾ ವಿಮಾನಗಳನ್ನು ಕಣ್ಣೂರು ವಿಮಾನ ನಿಲ್ದಾಣಕ್ಕೆ ಬದಲಾವಣೆ ಮಾಡಲಾಗಿದೆ.

SCROLL FOR NEXT