ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೇಶದಲ್ಲಿ 20 ಲಕ್ಷ ಗಡಿ ದಾಟಿದ ಕೋವಿಡ್-19 ಪ್ರಕರಣ: ಮೋದಿ ಸರ್ಕಾರ ನಾಪತ್ತೆ: ರಾಹುಲ್ 

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ
Nagaraja AB
Updated On : 7 Aug 2020, 1:07 pm

ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಟ್ವಟರ್ ಖಾತೆಯಲ್ಲಿ ಈ ಹಿಂದಿನ ಟ್ವೀಟ್ ಗಳನ್ನು ಪುನರುಚ್ಚರಿಸಿರುವ ರಾಹುಲ್ ಗಾಂಧಿ, ಜುಲೈ 17 ರಂದು 10 ಲಕ್ಷ ದಾಟಿದ ಕೋವಿಡ್-19 ಪ್ರಕರಣಗಳು ಆಗಸ್ಟ್ 10 ರೊಳಗೆ 20 ಲಕ್ಷ ದಾಟಿದೆ. ಈ ಸಾಂಕ್ರಾಮಿಕ ರೋಗ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 20 ಲಕ್ಷ ಗಡಿ ದಾಟಿದ್ದು, ಮೋದಿ ಸರ್ಕಾರ ನಾಪತ್ತೆಯಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement