ದೇಶ

ಪಾಲ್ಗಾರ್: ಫೇಸ್ ಬುಕ್ ನಲ್ಲಿ ಲೈವ್ ಮಾಡಿ, ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Srinivasamurthy VN

ಪಾಲ್ಗಾರ್: 22 ವರ್ಷದ ವ್ಯಕ್ತಿಯೋರ್ವ ಫೇಸ್ ಬುಕ್ ನಲ್ಲಿ ಲೈವ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ನಲ್ಲಿ ನಡೆದಿದೆ.

ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಜೌಹಕ್ ಟೌನ್ ನ ನವನಾಥ್ ಭಂಗೆ ಎಂಬ 22 ವರ್ಷದ ವ್ಯಕ್ತಿ ಫೇಸ್ ಬುಕ್ ನಲ್ಲಿ ಲೈವ್ ಮಾಡಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. 

ಪೊಲೀಸ್ ಮೂಲಗಳ ಪ್ರಕಾರ ಆತ್ಮಹತ್ಯೆಗೆ ಶರಣಾದ ನವನಾಥ್ ಭಂಗೆ ವಾಡಾ ತಾಲೂಕಿನ ನಿವಾಸಿಯಾಗಿದ್ದು, ಈತ ಹೊಟೆಲ್ ನಲ್ಲಿ ಕೆಲಸ ಮಾಡಿಕೊಂಡು ಸಿಬ್ಬಂದಿಗಳೊಂದಿಗೆ ರೂಮಿನಲ್ಲಿ ವಾಸಿಸುತ್ತಿದ್ದ. ರೂಮಿನಲ್ಲಿ ಯಾರೂ ಇಲ್ಲದ ವೇಳೆ ಆತ ಫೈಸ್ ಬುಕ್ ನಲ್ಲಿ ಲೈವ್ ಮಾಡಿ ಸೀಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವೇಳೆ ಹಲವರು ಕಠಿಣ ನಿರ್ಧಾರ ತೆಗೆದುಕೊಳ್ಳದಂತೆ ಮನವಿ ಮಾಡಿದ್ದರು. ಆದರೆ ಆತ ಅಷ್ಟು ಹೊತ್ತಿಗಾಗಲೇ ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಡೆತ್ ನೋಟ್ ಗಾಗಿ ಶೋಧ ನಡೆಸಿದ್ದು, ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ. 

SCROLL FOR NEXT