ಸಂಗ್ರಹ ಚಿತ್ರ 
ದೇಶ

ತರಕಾರಿ-ದಿನಸಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿ, ರಾಜ್ಯಗಳಿಗೆ ಕೇಂದ್ರದ ಹೊಸ ಸೂಚನೆ

ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ.

ನವದೆಹಲಿ: ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಶನಿವಾರ ಸೂಚನೆ ನೀಡಿದೆ.

ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಕೇಂದ್ರ ಸರ್ಕಾರ ಹೊಸ ನಿರ್ಧಾರ ತೆಗೆದುಕೊಂಡಿದ್ದು, ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನ ಪರೀಕ್ಷೆಗೆ ಒಳಪಡಿಸುವುದು ಸೂಕ್ತ ಎಂದೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ದೇಶಾದ್ಯಂತ ದಿನಬಳಕೆ ವಸ್ತುಗಳ ವ್ಯಾಪಾರಿಗಳು, ದಿನಸಿ ಮತ್ತು ತರಕಾರಿ ವ್ಯಾಪಾರಿಗಳ ಮುಖಾಂತರ ಸೋಂಕು ಪ್ರಸರಣದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದು, ಇದೇ ಕಾರಣಕ್ಕೆ ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ದಿನಸಿ ಅಂಗಡಿ ಮತ್ತು ತರಕಾರಿ ವ್ಯಾಪಾರಿಗಳ ಮೂಲಕ ಕೋವಿಡ್ ಸೋಂಕು ಹರಡುವ ಸಂಭಾವ್ಯರಾಗಿರುವ ಕಾರಣ, ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್ ಮಾಡಿಸಬೇಕು ಎಂದು ಸೂಚಿಸಲಾಗಿದೆ ಎಂದು ಅವರು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. 

ಪತ್ರದಲ್ಲಿ ಅಲ್ಲದೆ ಕೊರೋನಾ ಸೋಂಕಿತರನ್ನು ಕರೆದೊಯ್ಯಲು ಅನುಕೂಲವಾಗುವಂತೆ ಸುಸಜ್ಜಿತ ಆಂಬುಲೆನ್ಸ್ ಸೌಲಭ್ಯ ನಿಗದಿಪಡಿಸಬೇಕು. ತುರ್ತು ಕರೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಸೂಚಿಸಿದ್ದಾರೆ. ಕೊರೋನಾ ಈಗ ಹೊಸ ಪ್ರದೇಶಗಳಿಗೆ ಹರಡುತ್ತಿದೆ. ಹೀಗಾಗಿ ಆರಂಭದಲ್ಲಿಯೇ ಸೋಂಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುವ ಮೂಲಕ ಕೊರೋನಾ ಸೋಂಕಿನ ಪ್ರಕರಣ ಕಡಿಮೆ ಮಾಡುವಂತೆ ಸೂಚಿಸಿದ್ದಾರೆ. 

ಇದಲ್ಲದೇ, ಆಮ್ಲಜನಕ ವ್ಯವಸ್ಥೆ ಹೊಂದಿರುವ ಅಂಬುಲೆನ್ಸ್​ ಹಾಗೂ ತುರ್ತು ಸ್ಪಂದನಾ ವ್ಯವಸ್ಥೆಯನ್ನು ಕಾರ್ಯಾಚರಣೆಗೊಳಿಸಬೇಕಾಗುತ್ತದೆ. ಅಂಬುಲೆನ್ಸ್​ ಸೇವೆ ದೊರೆಯದ ಪ್ರಕರಣಗಳನ್ನು ನಿತ್ಯವೂ ಗಮನಿಸಬೇಕು ಹಾಗೂ ಅದನ್ನು ಶೂನ್ಯಕ್ಕೆ ಇಳಿಸಬೇಕು. ಹೊಸ ಪ್ರದೇಶಗಳಲ್ಲಿ ಸಣ್ಣ ಅಥವಾ ದೊಡ್ಡ ಪ್ರಮಾಣದಲ್ಲಿ ಕರೊನಾ ಪ್ರಕರಣಗಳು ಕಂಡುಬರುತ್ತಿವೆ. ಮುಖ್ಯವಾಗಿ ಇದನ್ನು ನಿಯಂತ್ರಿಸಬೇಕಿದೆ. ಇದರ ಜತೆಗೆ ಜೀವ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕಿದೆ ಎಂದು ಭೂಷಣ್​ ಹೇಳಿದ್ದಾರೆ.  ಸಾವಿನ ಸಂಖ್ಯೆಯನ್ನು ಕೂಡ ನಿಯಂತ್ರಣಕ್ಕೆ ತರಬೇಕಿದ್ದು, ಇದು ಶೇ.1ಕ್ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ರಾಜೇಶ್​ ಭೂಷಣ್​ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT