ಶಾ ಫೈಜಲ್ 
ದೇಶ

ಮೋದಿ ಸರ್ಕಾರದ ವಿರುದ್ದ ಸಿಡಿದೆದ್ದು ರಾಜಕೀಯ ಸೇರಿದ್ದ ಐಎಎಸ್ ಅಧಿಕಾರಿ ಶಾ ಫೈಜಲ್ ಮತ್ತೆ ಸರ್ಕಾರಿ ಸೇವೆಗೆ?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದು ತಮ್ಮ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ರಾಜಕೀಯ ಪಕ್ಷ ಸ್ಥಾಪಿಸಿದ್ದ ಮಾಜಿ ಐಎಎಸ್ ಅಧಿಕಾರಿ ಶಾ ಫೈಜಲ್ ಇದೀಗ ರಾಜಕೀಯವನ್ನು ತೊರೆದಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದು ತಮ್ಮ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ರಾಜಕೀಯ ಪಕ್ಷ ಸ್ಥಾಪಿಸಿದ್ದ ಮಾಜಿ ಐಎಎಸ್ ಅಧಿಕಾರಿ ಶಾ ಫೈಜಲ್ ಇದೀಗ ರಾಜಕೀಯವನ್ನು ತೊರೆದಿದ್ದಾರೆ.

2019 ಮಾರ್ಚ್ 16ರಂದು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್ಮೆಂಟ್(ಜೆಕೆಪಿಎಂ) ಪಕ್ಷವನ್ನು ಸ್ಥಾಪಿಸಿದ್ದ ಶಾ ಫೈಜಲ್ ಇದೀಗ ರಾಜಕೀಯವನ್ನು ತೊರೆದಿದ್ದಾರೆ. ಇದೇ ವೇಳೆ ಅವರು ಮತ್ತೆ ಸರ್ಕಾರಿ ಸೇವೆ ಸಲ್ಲಿಸುತ್ತಾರೆ ಎಂದು ಹೇಳಲಾಗುತ್ತಿದೆ. 

ಶಾ ಫೈಜಲ್ Dbjvdvg ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಹಾಲಿ ಜೆಕೆಪಿಎಂ ಉಪಾಧ್ಯಕ್ಷ ಫಿರೋಜ್ ಪೀರ್ಜಾಡಾ ಅವರನ್ನು ಮಧ್ಯಂತರ ಅಧ್ಯಕ್ಷರಾಗಿ ಸರ್ವಾನುಮತದಿಂದ ನೇಮಕ ಮಾಡಲಾಗಿದೆ. 

ಕಳೆದ ವರ್ಷ ಆಗಸ್ಟ್ 5ರಂದು ಆರ್ಟಿಕಲ್ 370 ರನ್ನು ರದ್ದುಗೊಳಿಸಿತ್ತು. ಅಂದಿನಿಂದ ಫೈಜಲ್ ರನ್ನು ಗೃಹಬಂಧನದಲ್ಲಿ ಇಡಲಾಗಿದೆ ಎಂದು ಜೆಕೆಪಿಎಂ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ. 

ಗೃಹ ಬಂಧನದಲ್ಲಿರುವುದರಿಂದ ರಾಜಕೀಯ ಚಟುವಟಿಕೆಗಳನ್ನು ಮುಂದುವರಿಸುವ ಸ್ಥಿತಿಯಲ್ಲಿಲ್ಲ ಎಂದು ಫೈಜಲ್ ಪಕ್ಷದ ರಾಜ್ಯ ಕಾರ್ಯನಿರ್ವಾಹಕ ಸದಸ್ಯರಿಗೆ ಮಾಹಿತಿ ನೀಡಿದ್ದರು. ಜೊತೆಗೆ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ವಿನಂತಿಸಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ವಿನಂತಿಯನ್ನು ಗಮನದಲ್ಲಿಟ್ಟುಕೊಂಡು, ಅವರ ಮನವಿಯನ್ನು ಸ್ವೀಕರಿಸಲು ನಿರ್ಧರಿಸಲಾಯಿತು. ಇದರಿಂದಾಗಿ ಅವರು ತಮ್ಮ ಜೀವನವನ್ನು ಉತ್ತಮವಾಗಿ ಮುಂದುವರಿಸಬಹುದು ಮತ್ತು ಅವರು ಆಯ್ಕೆ ಮಾಡುವ ಯಾವುದೇ ರೀತಿಯಲ್ಲಿ ಕೊಡುಗೆ ನೀಡಬಹುದು ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಆಗಸ್ಟ್ 5, 2019ರಿಂದ ಗೃಹಬಂಧನದಲ್ಲಿರುವ ಪಕ್ಷದ ಮುಖ್ಯಸ್ಥ ಜಾವೇದ್ ಮುಸ್ತಫಾ ಮಿರ್ ಅವರ ರಾಜೀನಾಮೆಯನ್ನು ಜೆಕೆಪಿಎಂ ಅಂಗೀಕರಿಸಿದೆ. ಪಿಡಿಪಿ ಮಾಜಿ ನಾಯಕ ಮತ್ತು ಸಚಿವರಾಗಿದ್ದ ಮುಸ್ತಫಾ ಕಳೆದ ವರ್ಷ ಜೆಕೆಪಿಎಂಗೆ ಸೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT