ದೇಶ

ಮುನ್ನಾರ್ ಭೂಕುಸಿತ ದುರಂತ: ಮತ್ತೆ 6 ಮೃತದೇಹ ಪತ್ತೆ, ಸಾವಿನ ಸಂಖ್ಯೆ 49ಕ್ಕೆ ಏರಿಕೆ, 22 ಮಂದಿ ನಾಪತ್ತೆ!

Vishwanath S

ತಿರುವನಂತಪುರಂ: ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. 

ಭಾರೀ ಮಳೆಯಿಂದ ಕೆರಳದ ಇಡುಕ್ಕಿಯಲ್ಲಿ ಭೂ ಕುಸಿತ ಸಂಭವಿಸಿತ್ತು. ನಂತರ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು ಇಂದು 6 ಮಂದಿ ಮೃತದೇಹ ಹೊರತೆಗೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. 

ಆರು ಮೃತದೇಹದ ಪೈಕಿ ನಾಲ್ವರನ್ನು ಗುರುತಿಸಲಾಗಿದ್ದು 14 ವರ್ಷದ ವಿನೋಧಿನಿ, 12 ವರ್ಷದ ರಾಜಲಕ್ಷ್ಮೀ, 32 ವರ್ಷದ ಪ್ರತೀಶ್ ಮತ್ತು 58 ವರ್ಷದ ವೇಲುತ್ತೈ ಎಂದು ತಿಳಿದುಬಂದಿದೆ. 

ಮುನ್ನಾರ್ ನಿಂದ 25 ಕಿ.ಮೀ.ದೂರದಲ್ಲಿರುವ ರಾಜಾಮಲೈ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದು, ಸುಮಾರು 80 ಜನ ಈ ಪ್ರದೇಶದಲ್ಲಿ ವಾಸವಿದ್ದರು ಎನ್ನಲಾಗಿದೆ. ಸದ್ಯಕ್ಕೆ 49 ಮಂದಿಯ ಮೃತದೇಹ ಸಿಕ್ಕಿದ್ದು ಇನ್ನು 22 ಮಂದಿ ನಾಪತ್ತೆಯಾಗಿದ್ದಾರೆ. ಈ ಸಂಬಂಧ ರಕ್ಷಣಾ ಸಿಬ್ಬಂದಿ ನಿರಂತರಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 

ಈ ಘಟನೆ ಸಂಬಂಧ ಆಘಾತ ವ್ಯಕ್ತಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪರಿಹಾರ ಘೋಷಿಸಿದ್ದಾರೆ. 

SCROLL FOR NEXT