ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೇಶದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 62,064 ಕೇಸ್ ಪತ್ತೆ, 22 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 62,064 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22 ಲಕ್ಷ ಗಡಿ ದಾಟಿದೆ ಎಂದು ಸೋಮವಾರ ತಿಳಿದುಬಂದಿದೆ.

ಸಂಗ್ರಹ ಚಿತ್ರ
Manjula VN
Updated On : 10 Aug 2020, 12:34 pm

ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 62,064 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22 ಲಕ್ಷ ಗಡಿ ದಾಟಿದೆ ಎಂದು ಸೋಮವಾರ ತಿಳಿದುಬಂದಿದೆ. 

ಒಂದೇ ದಿನ ದೇಶದಾದ್ಯಂತ 62,064 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 22,15,075ಕ್ಕೆ ತಲುಪಿದೆ. ಇನ್ನು ನಿನ್ನೆ ದಾಖಲೆಯ 1,007 ಮಂದಿ ಮಹಾಮಾರಿ ವೈರಸ್ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 44,386ಕ್ಕೆ ಏರಿಕೆಯಾಗಿದೆ. 

ಈ ನಡುವೆ 22,15,075 ಮಂದಿ ಸೋಂಕಿತರ ಪೈಕಿ 15,35,744 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 6,34,945 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

Advertisement

Advertisement

ಇದೇ ವೇಳೆ ಮಹಾರಾಷ್ಟ್ರದಲ್ಲಿ 12,822 ಕೇಸ್ 275 ಸಾವು, ತಮಿಳುನಾಡಿನಲ್ಲಿ 5,994 ಕೇಸ್, 119 ಮಂದಿ ಸಾವು, ಆಂಧ್ರಪ್ರದೇಶದಲ್ಲಿ 10,080 ಕೇಸ್ 97 ಮಂದಿ ಸಾವನ್ನಪ್ಪಿದ್ದಾರೆ. ಈ ಮಧ್ಯೆ ಶನಿವಾರ ದಾಖಲೆಯ 7,17,364 ಕೊರೋನಾ ಪರೀಕ್ಷೆಗಳನ್ನು ಮಾಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement