ದೇಶ

ಕರ್ನಾಟಕ ಗಡಿ- ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹುಲಿ ಸಂರಕ್ಷಣಾ ಕಾರ್ಯಕರ್ತರ ವಿರೋಧ

Srinivas Rao BV

ಬೆಳಗಾವಿ: ಕರ್ನಾಟಕ ಗಡಿ-ಗೋವಾ ಭಾಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಹುಲಿ ಸಂರಕ್ಷಣಾ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂಬಂಧ ತಕ್ಷಣವೇ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ ಟಿಸಿಎ) ಮಧ್ಯಪ್ರವೇಶಕ್ಕೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಗೋವಾದ ಲೋಕೋಪಯೋಗಿ ಇಲಾಖೆ ಈಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ಹೆದ್ದಾರಿಯನ್ನಾಗಿ ಮಾಡಲು ಪ್ರಸ್ತಾವನೆ ಸಲ್ಲಿಸಿದೆ. 
  
ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ವನ್ಯಜೀವಿ ಕಾರ್ಯಕರ್ತ ಗಿರಿಧರ್ ಕುಲಕರ್ಣಿ ಪ್ರಸ್ತಾವಿತ ಯೋಜನೆ ಎನ್ ಹೆಚ್ 4A ಭಗವಾನ್ ಮಹಾವೀರ್ ಅಭಯಾರಣ್ಯ ರಾಷ್ಟ್ರೀಯ ಉದ್ಯಾನದ ಮೂಲಕ ಹಾದು ಹೋಗುತ್ತದೆ. ಈ ಪ್ರದೇಶದಲ್ಲಿ ಹುಲಿಗಳು, ಚಿರತೆ ಹಾಗೂ ಇತರ ವನ್ಯಜೀವಿಗಳಿಗೆ ಆವಾಸಸ್ಥಾನವಾಗಿದೆ.  ಈ ಯೋಜನೆ ವನ್ಯಜೀವಿಗಳಿಗೆ ಮಾರಕವಾಗಲಿದೆ ಎಂದು ಹೇಳಿದ್ದಾರೆ. 

SCROLL FOR NEXT