ಸಾಕ್ಷಿ ಮಹಾರಾಜ್ 
ದೇಶ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನಿ ನಂಬರ್ ನಿಂದ ಬೆದರಿಕೆ ಕರೆ

ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಬೆದರಿಕೆ ಬಂದಿದೆ. 

ನವದೆಹಲಿ: ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗೆ ಪಾಕಿಸ್ತಾನದ ನಂಬರ್ ನಿಂದ ಬೆದರಿಕೆ ಬಂದಿದೆ. 

ಸ್ವತಃ ಸಾಕ್ಷಿ ಮಹಾರಾಜ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ನಂಬರ್ ನ್ನು ಬಳಕೆ ಮಾಡುತ್ತಿರುವ ವ್ಯಕ್ತಿಯೋರ್ವ ತಮಗೆ ಕರೆ ಮಾಡಿ ತಮ್ಮನ್ನು, ದೇಶದ ಇತರ ಉನ್ನತ ಮಟ್ಟದ ನಾಯಕರನ್ನು ಕೊಲೆ ಮಾಡುವುದಕಾಗಿ  ಬೆದರಿಕೆ ಹಾಕಿದ್ದಾನೆಂದು ಹೇಳಿದ್ದಾರೆ. 

ಈ ಹಿಂದೆ ಇಂಟರ್ ನೆಟ್ ಮೂಲಕ ಬೆದರಿಕೆ ಬಂದಿತ್ತು. ಅದರ ಮರು ದಿನ ನನಗೆ ಪಾಕಿಸ್ತಾನಿ ನಂಬರ್ ನಿಂದ ಕೊಲೆ ಬೆದರಿಕೆ ಬಂದಿದೆ ನನ್ನನ್ನು ನಿಂದಿಸಿ 10 ದಿನಗಳಲ್ಲಿ ನನ್ನ ಹಾಗೂ ನನ್ನ ಮನೆಯ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ, ಇದರಿಂದ ನಮಗೆ ಭಯ ಉಂಟಾಗಿದ್ದು, ಗೃಹ ಕಾರ್ಯದರ್ಶಿ ಅವಿನಾಶ್ ಅವಸ್ಥಿಗೆ ಕರೆ ಮಾಡಿ ಮಾಹಿತಿ ತಲುಪಿಸಿದೆ ಎಂದು ಹೇಳಿದ್ದಾರೆ. 

ಈ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರಿಗೂ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ