ದೇಶ

ಹಿಜ್ಬುಲ್ ಮುಜಾಹಿದ್ದೀನ್ ಅಡಗುತಾಣಗಳ ಮೇಲೆ ದಾಳಿ: ಓರ್ವ ಉಗ್ರ ಸೇರಿ ನಾಲ್ವರು ಸಚರರ ಬಂಧನ

Manjula VN

ಕುಪ್ವಾರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಅಗಡುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಉಗ್ರ ಸೇರಿದಂತೆ ನಾಲ್ವರು ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ಕುಪ್ವಾರದ ಲೋಲಬ್'ನ ಲಾಲ್ಪೊರಾ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಬಂಧಿತರನ್ನು ಪರ್ವೈಜ್ ಅಹ್ಮದ್ ಭಟ್ (22), ಅಲ್ತಾಫ್ ಅಹ್ಮದ್ ಮಿರ್ (35), ಘ್ ಮೊಹಮ್ಮದ್ (35), ನಜೀಮುದ್ದೀನ್ ಗುಜ್ಜರ್ (44), ಮತ್ತು ಅಬ್ದುಲ್ ಕ್ವಾಯೂಮ್ (29) ಎಂದು ಗುರ್ತಿಸಲಾಗಿದೆ. 

ಜಮ್ಮು ಮತ್ತು ಕಾಶ್ಮೀರ ಪೊಲೀಸರ ಖಚಿತ ಮಾಹಿತಿ  ಆಧಾರದ ಮೇಲೆ ಭದ್ರತಾ ಪಡೆಗಳು ಹಾಗೂ ಪೊಲೀಸರು ಸೋಮವಾರ ಸಂಜೆಯಿಂದ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಮಚಿಲ್ ಸೆಕ್ಟರ್ ಬಳಿಕ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದರು. ಉಗ್ರರ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳ್ಳುವಂತೆ ಮಾಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆ ನಡೆಸಲಾಗಿದೆ. 

ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಮೂಲಕ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದರು. ಈ ವೇಳೆ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದರು. 

SCROLL FOR NEXT