ದೇಶ

ರಾಜಸ್ತಾನ ಸರ್ಕಾರ 5 ವರ್ಷಗಳ ಅವಧಿ ಪೂರ್ಣಗೊಳಿಸಲಿದ್ದು, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲವು ಸಾಧಿಸಲಿದೆ: ಗೆಹ್ಲೋಟ್

Manjula VN

ಜೈಪುರ: ರಾಜಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ನಮ್ಮ ಸರ್ಕಾರ ಐದು ವರ್ಷಗಳ ಅವಧಿಯನ್ನೂ ಪೂರ್ಣಗೊಳಿಸಲಿದ್ದು, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಗೆಲವು ಸಾಧಿಸಲಿದೆ ಎಂದು ರಾಜಸ್ತಾನ ರಾಜ್ಯದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಂಗಳವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡಾಯ ಶಾಸಕರ ಸಮಸ್ಯೆ ಆಲಿಸಲು, ಪರಿಹರಿಸಲು ಕಾಂಗ್ರೆಸ್ ಈಗಾಗಲೇ ಮೂವರು ಸದಸ್ಯರ ಸಮಿತಿಯನ್ನು ರಚನೆ ಮಾಡಿದೆ. ಸಮಿತಿ ಈಗಾಗಲೇ ಸಮಸ್ಯೆಗಳನ್ನು ಆಲಿಸಿದ್ದು, ದೂರಾಗಿದ್ದ ಶಾಸಕರು ಮತ್ತೆ ಪಕ್ಷಕ್ಕೆ ಬಂದಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಶೀಘ್ರದಲ್ಲಿಯೇ ಪರಿಹರಿಸಲಾಗುತ್ತದೆ. ಪಕ್ಷದಲ್ಲಿ ಮತ್ತೆ ಶಾಂತಿ ಹಾಗೂ ಭ್ರಾತೃತ್ವ ಮರುಸ್ಥಾಪನೆಗೊಳ್ಳಲಿದೆ ಎಂದು ಹೇಳಿದ್ದಾರೆ. 

ಬಿಜೆಪಿ ನಾಯಕರು ರಾಜಸ್ತಾನದಲ್ಲಿ ಸರ್ಕಾರವನ್ನು ಉರುಳಿಸಲು ಯತ್ನಿಸಿದ್ದರು. ಆದರೆ, ಅಂತಿಮವಾಗಿ ನಮ್ಮ ಪಕ್ಷದ ಶಾಸಕರು ನಮ್ಮ ಜೊತೆಗೆ ಕೈಜೋಡಿಸಿದರು. ಯಾವೊಬ್ಬ ಸದಸ್ಯರೂ ಕೂಡ ಪಕ್ಷ ತೊರೆದಿಲ್ಲ. ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳಾಗಿರುವ ತೆರಿಗೆ ಹಾಗೂ ಸಿಬಿಐನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಧರ್ಮದ ಹೆಸರನ್ನು ಇಟ್ಟುಕೊಂಡು ಮತ ಪಡೆಯಲು ಜನರಲ್ಲಿ ಒಡಕು ಮೂಡಿಸುತ್ತಿದ್ದಾರೆಂದು ಆರೋಪಿಸಿದ್ದಾರೆ. 

SCROLL FOR NEXT