ತ್ರಿಸದಸ್ಯ ಸಮಿತಿ ಸಭೆಯಲ್ಲಿ ಪಾಲ್ಗೊಂಡಿರುವ ಸಚಿನ್ ಪೈಲಟ್ ಹಾಗೂ ಬಂಡಾಯ ಶಾಸಕರು 
ದೇಶ

ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆ ಆಲಿಸಿದ ಸೋನಿಯಾ ಗಾಂಧಿಗೆ ಧನ್ಯವಾದಗಳು: ಸಚಿನ್ ಪೈಲಟ್

ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆಗಳನ್ನು ಆಲಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಹಾಗೂ ಪಕ್ಷದ ನಾಯಕಿ, ನಾಯಕರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಂಗಳವಾರ ಹೇಳಿದ್ದಾರೆ. 

ನವದೆಹಲಿ: ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆಗಳನ್ನು ಆಲಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಹಾಗೂ ಪಕ್ಷದ ನಾಯಕಿ, ನಾಯಕರಾದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಂಗಳವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ನನ್ನ ಹಾಗೂ ಬಂಡಾಯ ಶಾಸಕರ ಸಮಸ್ಯೆಗಳನ್ನು ಆಲಿಸಿದ ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿಯವರಿಗೆ ಹಾಗೂ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳು. ನನ್ನ ನಂಬಿಕೆಗಳೊಂದಿಗೆ ದೃಢವಾಗಿ ನಿಲ್ಲುತ್ತೇನೆ. ಭಾರತದ ಉತ್ತಮತೆಗಾಗಿ ಕೆಲಸ ಮಾಡುತ್ತೇನೆ. ರಾಜಸ್ಥಾನ ಜನತೆಗೆ ನೀಡಲಾಗಿರುವ ಭರವಸೆಗಳನ್ನು ತಲುಪಲು ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ರಕ್ಷಿಸಲು ಕೆಲಸ ಮಾಡುತ್ತೇನೆಂದು ಹೇಳಿದ್ದಾರೆ. 

ಸಚಿನ್ ಪೈಲಟ್ ಹಾಗೂ ಅವರ ಜೊತೆಗಿರುವ ಬಂಡಾಯ ಶಾಸಕರು ಎತ್ತಿರುವ ವಿಷಯಗಳ ಬಗ್ಗೆ ಗಮನಹರಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಈ ಹಿಂದೆ ತ್ರಿಸದಸ್ಯ ಸಮಿತಿ ರಚನೆ ಮಾಡಿದ್ದರು. 

ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು ನೇಮಿಕ ಮಾಡಲಾಗಿದ್ದು, ಸಮಿತಿ ನಡೆಸಿದ ಸಭೆಯಲ್ಲಿ ಸಚಿನ್ ಪೈಲಟ್ ಹಾಗೂ ಅವರ ಜೊತೆಗಿನ ಬಂಡಾಯ ಶಾಸಕರು ನಿನ್ನೆಯಷ್ಟೇ ಭಾಗಿಯಾಗಿದ್ದರು. ಸಭೆ ಬಳಿಕ ಸಚಿನ್ ಪೈಲಟ್ ಅವರು ಕಾಂಗ್ರೆಸ್ ಪಾಳಯಕ್ಕೆ ಮರಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT