ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪ್ರಣಬ್‌ ಮುಖರ್ಜಿ ಸ್ಥಿತಿ 'ತುಂಬಾ ಗಂಭೀರ'; ಚೇತರಿಕೆಗಾಗಿ ಪ್ರಾರ್ಥನೆ

ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಬುಧವಾರ ಬೆಳಗ್ಗೆ ಮತ್ತಷ್ಟು ಗಂಭೀರವಾಗಿದ್ದು, ವೆಂಟಿಲೇಟರ್‌ ನೆರವಿನಿಂದ ಉಸಿರಾಡುತ್ತಿದ್ದಾರೆ.

ಪ್ರಣಬ್ ಮುಖರ್ಜಿ
Srinivasa Murthy VN
Updated On : 12 Aug 2020, 5:04 pm

ನವದೆಹಲಿ: ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಬುಧವಾರ ಬೆಳಗ್ಗೆ ಮತ್ತಷ್ಟು ಗಂಭೀರವಾಗಿದ್ದು, ವೆಂಟಿಲೇಟರ್‌ ನೆರವಿನಿಂದ ಉಸಿರಾಡುತ್ತಿದ್ದಾರೆ.

ಆಸ್ಪತ್ರೆ ವರದಿಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತಾ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮುಖರ್ಜಿ ಅವರ ಶೀಘ್ರ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ, ಪೂಜೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಮುಖರ್ಜಿ ಅವರ ಬಂಗಾಳದ ಪುರಾತನ ಮನೆಯಲ್ಲಿಯೂ ಪೂಜೆ ಹಮ್ಮಿಕೊಳ್ಳಲಾಗಿತ್ತು.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಣಾಮ ಮುಖರ್ಜಿ ಆ.10ರಂದು ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಆದರೆ, ಅದರಿಂದ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಈ ನಡುವೆ, ಅವರಿಗೆ ಕೋವಿಡ್‌ ಸೋಂಕು ಕೂಡ ದೃಢಪಟ್ಟಿತ್ತು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಮುಖರ್ಜಿ ಅವರು ಆರೋಗ್ಯ ವಿಚಾರಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಮುಖರ್ಜಿ ಪುತ್ರಿ ಶರ್ಮಿಷ್ಟಾ ಮುಖರ್ಜಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.

Advertisement

Advertisement

ಮಂಗಳವಾರ ಅವರ ಪುತ್ರಿ ಅಭಿಜಿತ್‌ ಮುಖರ್ಜಿ ಅವರು, ತಮ್ಮ ತಂದೆ ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ ಎಂದಿದ್ದರು.

ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಪ್ರಣಬ್ ಮುಖರ್ಜಿ ಅವರನ್ನು ದೆಹಲಿಯ ಸೇನಾ ರೆಫರಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಅವರು ಮೆದುಳಿನ ಶಸ್ತ್ರ ಚಿಕಿತ್ಸೆಗೂ ಒಳಪಡಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಕೃತಕ  ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments