ಸಂಗ್ರಹ ಚಿತ್ರ 
ದೇಶ

ಛತ್ತೀಸ್ ಘಡದಲ್ಲಿ ಎನ್ ಕೌಂಟರ್: ನಾಲ್ಕು ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು

ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಾಲ್ಕು ಮಂದಿ ನಕ್ಸಲರನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.

ಸುಕ್ಮಾ: ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಾಲ್ಕು ಮಂದಿ ನಕ್ಸಲರನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.

ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯ ಹೊರವಲಯದ ಜಗರಗುಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಎನ್ಕೌಂಟರ್ ನಡೆದಿದ್ದು, ಘಟನೆಯಲ್ಲಿ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಗಳ ಸಿಬ್ಬಂದಿಗಳು ತೊಡಗಿದ್ದರು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಬಸ್ತಾರ್ ) ಸುಂದರ್ ರಾಜ್ ಪಿ ಹೇಳಿದ್ದಾರೆ.

ಮೂಲಗಳ ಪ್ರಕಾರ ಫುಲಂಪಾರ್ ಗ್ರಾಮದಲ್ಲಿ ಸೇನಾಪಡೆಗಳು ಗಸ್ತು ತಿರುಗುತ್ತಿದ್ದಾಗ ಅಲ್ಲಿಯೇ ಬಿಡಾರ ಹೂಡಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಈ ವೇಳೆ ನಾಲ್ಕು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ. ಅಂತೆಯೇ ಹಲವು ನಕ್ಸಲರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ನಾಲ್ಕು ಪುರುಷ ನಕ್ಸಲರ ಮೃತದೇಹಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ .303 ರೈಫಲ್ ಗಳನ್ನು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತೆಯೇ ಶೋಧ ಕಾರ್ಯ ಕೂಡ ತೀವ್ರಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video