ದೇಶ

ಉತ್ತರಪ್ರದೇಶ: 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಕಾಲೇಜು ಸಂಗಾತಿಯಿಂದಲೇ ರೇಪ್!

Vishwanath S

ಬಲಿಯಾ: ಉತ್ತರ ಪ್ರದೇಶ ಜಿಲ್ಲೆಯ ನಾಗರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಆಗಸ್ಟ್ 3ರಂದು ತನ್ನ ಕಾಲೇಜು ಸಂಗಾತಿ ಮೋನು ಕುಮಾರ್ ಅಜಿತ್(20) ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ನಾಗರಾ ಸ್ಟೇಷನ್ ಹೌಸ್ ಆಫೀಸರ್(ಎಸ್‌ಎಚ್‌ಒ) ಯಾದ್ವೇಂದ್ರ ಪಾಂಡೆ ತಿಳಿಸಿದ್ದಾರೆ.

ಬಾಲಕಿಯ ತಂದೆಯಿಂದ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

SCROLL FOR NEXT