ಪ್ರಣಬ್ ಮುಖರ್ಜಿ (ಸಂಗ್ರಹ ಚಿತ್ರ) 
ದೇಶ

'ನನ್ನ ತಂದೆ ಜೀವಂತವಾಗಿದ್ದಾರೆ, ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ': ಅಭಿಜಿತ್ ಮುಖರ್ಜಿ

ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಖ್ಯಾತ ಪತ್ರಕರ್ತರು ಸೋಷಿಯಲ್ ಮೀಡಿಯಾಗಳಲ್ಲಿ ಹಬ್ಬಿಸುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುತ್ರ ಅಭಿಜಿತ್ ಮುಖರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ನನ್ನ ತಂದೆ ಇನ್ನೂ ಜೀವಂತವಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಖ್ಯಾತ ಪತ್ರಕರ್ತರು ಸೋಷಿಯಲ್ ಮೀಡಿಯಾಗಳಲ್ಲಿ ಹಬ್ಬಿಸುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಪುತ್ರ ಅಭಿಜಿತ್ ಮುಖರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಭಾರತದಲ್ಲಿ ಮಾಧ್ಯಮಗಳು ನಕಲಿ ಸುದ್ದಿ ಸೃಷ್ಟಿಸುವ ಫ್ಯಾಕ್ಟರಿಗಳಾಗಿಬಿಟ್ಟಿವೆ ಎಂದು ಅವರು ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. 

ಈ ಮಧ್ಯೆ ಮಾಜಿ ರಾಷ್ಟ್ರಪತಿಗಳ ಆರೋಗ್ಯದ ಬಗ್ಗೆ ಪ್ರಕಟಣೆ ಹೊರಡಿಸಿರುವ ದೆಹಲಿಯ ಆರ್ಮಿ ರಿಸರ್ಚ್ ಅಂಡ್ ರೆಫರಲ್ ಆಸ್ಪತ್ರೆ, ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ತೀವ್ರ ಕೋಮಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ.

ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ನಾಡಿಮಿಡಿತ ಸ್ಥಿರವಾಗಿದ್ದು, ವೆಂಟಿಲೇಟರ್ ಆಸರೆಯಲ್ಲಿದ್ದಾರೆ ಎಂದು ಇಂದು ಬೆಳಗ್ಗೆ ಸ್ಪಷ್ಟನೆ ನೀಡಿದೆ. 

ಮಾಜಿ ರಾಷ್ಟ್ರಪತಿಗಳು ಮೊನ್ನೆ ಆಗಸ್ಟ್ 10ರಂದು ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಲ್ಲಿ ಕೊರೋನಾ ಪಾಸಿಟಿವ್ ಕೂಡ ಬಂದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT