ದೇಶ

ಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ನೌಗಾಮ್ ನಲ್ಲಿ ಉಗ್ರರ ದಾಳಿ: 2 ಪೊಲೀಸರು ಹುತಾತ್ಮ, ಓರ್ವ ಪೊಲೀಸ್ ಗಂಭೀರ್ ಗಾಯ

Manjula VN

ನೌಗಾಮ್: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ನೌಗಾಮ್'ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ ಮತ್ತೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. 

ಶ್ರೀನಗರ ನಗರದ ಹೊರವಲಯದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು. 

ಕೂಡಲೇ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೀಗ ಗಾಯಗೊಂಡಿದ್ದ ಮೂವರು ಪೊಲೀಸರ ಪೈಕಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 

ಉಗ್ರರು ದಾಳಿ ನಡೆಸಿದ ಸ್ಥಳದಲ್ಲಿ ಇದೀಗ ಭದ್ರತಾ ಪಡೆಗಳು ಸುತ್ತುವರೆದಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆಂದು ವರದಿಗಳು ತಿಳಿಸಿವೆ. 

SCROLL FOR NEXT