ದೇಶ

ಬಿಜೆಪಿ ವರ್ಸಸ್ ಒಗ್ಗೂಡಿದ ಕಾಂಗ್ರೆಸ್: ರಾಜಸ್ಥಾನ ವಿಧಾನಸಭೆಯಲ್ಲಿ 'ಕೈ' ವಿಶ್ವಾಸ ಮಂಡನೆ!

Srinivasamurthy VN

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ನಿರ್ಣಾಯಕ ಹಂತ ತಲುಪಿದ್ದು, ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿಗೆ ತಿರುಗೇಟು ನೀಡಿರುವ ಆಡಳಿತಾ ರೂಢ ಕಾಂಗ್ರೆಸ್ ಪಕ್ಷ ಗೆಹ್ಲೂಟ್ ಸರ್ಕಾರದ ಪರ 'ವಿಶ್ವಾಸ ಮಂಡನೆ' ಮಾಡಿದೆ.

ರಾಜಸ್ಥಾನದಲ್ಲಿ ಆಡಳಿತದಲ್ಲಿರುವ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇಂದು ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಮುಂದಾಗಿತ್ತು. ಆದರೆ ಖಡಕ್ ತಿರುಗೇಟು ನೀಡಿರುವ ಕಾಂಗ್ರೆಸ್ ಅಧಿವೇಶನದ ಆರಂಭದಲ್ಲೇ‌ ವಿಶ್ವಾಸ ಮತಯಾಚನೆ ನಿರ್ಣಯ ಮಂಡಿಸಿದೆ. 

ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧರಿವಲ್ ಅವರು ಸರ್ಕಾರದ ಪರ ವಿಶ್ವಾಸ ಮಂಡನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ರಾಜಸ್ಥಾನದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಶಾಸಕರ ಕುದುರೆ ವ್ಯಾಪಾರ ಮಾಡಿ ಸರ್ಕಾರ ಉರುಳಿಸಿ ತನ್ನ ಸರ್ಕಾರ ರಚನೆಗೆ ಮುಂದಾಗಿದೆ. ಮಧ್ಯ ಪ್ರದೇಶ, ಮಣಿಪುರ ಮತ್ತು ಗೋವಾದಲ್ಲಿ ಕೇಂದ್ರ ಸರ್ಕಾರ ಇದೇ ಕೆಲಸ ಮಾಡಿತ್ತು. ರಾಜಸ್ಥಾನದಲ್ಲೂ ಇದೇ ಕಾರ್ಯಕ್ಕೆ ಮುಂದಾಗಿದೆ. ತನ್ನ ಅಧಿಕಾರ ದುರುಪಯೋಗ ಪಡಿಸಿಕೊಂಡು ಸರ್ಕಾರವನ್ನು ಉರುಳಿಸುವ ಕಾರ್ಯಕ್ಕೆ ಮುಂದಾಗಿದೆ. ಆದರೆ ಈ ಕಾರ್ಯದಲ್ಲಿ ಬಿಜೆಪಿ ಸಫಲವಾಗಿಲ್ಲ ಎಂದು ಹೇಳಿದರು.

ಇದೇ ವೇಳೆ ರಾಜಸ್ಥಾನವನ್ನು ಸೋಲಿಸಲು ಬಂದ ರಾಜ ಅಕ್ಪರ್ ಮೇವಾಡದ ಒಗ್ಗಟ್ಟಿನ ಶಕ್ತಿಯಿಂದಾಗಿ ಮೊದಲ ಬಾರಿಗೆ ಸೋಲಿನ ಕಂಡಿದ್ದ ಎಂದು ಹೇಳಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಪಕ್ಷೇತರ ಶಾಸಕರೂ ಸೇರಿದಂತೆ ಕಾಂಗ್ರೆಸ್ ಒಟ್ಟು 107 ಶಾಸಕರ ಬೆಂಬಲ ಹೊಂದಿದೆ. ಅಂತೆಯೇ ಬಿಜೆಪಿ 72 ಶಾಸಕರ ಬೆಂಬಲ ಹೊಂದಿದೆ. 

SCROLL FOR NEXT