ನರೇಂದ್ರ ಮೋದಿ 
ದೇಶ

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಸುದೀರ್ಘ ದಿನ ಪೂರೈಸಿದ ಕಾಂಗ್ರೇಸೇತರ ಪಿಎಂ!

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಮೈಲಿಗಲ್ಲು ನಿರ್ಮಿಸಿದ್ದಾರೆ. ಸುದೀರ್ಘ ಅವಧಿ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾಗಿದ್ದಾರೆ. 

ಇದೀಗ ಮಾಜಿ ಪ್ರಧಾನಿ, ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ದಾಖಲೆ ಮುರಿದಿದ್ದಾರೆ. ಇಷ್ಟೇ ಅಲ್ಲ ಸುದೀರ್ಘ ಅವಧಿಗೆ ಪ್ರಧಾನಿಯಾದ ಭಾರತದ ನಾಲ್ಕನೇ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಬಿಜೆಪಿಯಿಂದ ಪ್ರಧಾನಿ ಪಟ್ಟ ಅಲಂಕರಿಸಿದ ಅಟಲ್ ಬಿಹಾರಿ ವಾಜಪೇಯಿ 2,268 ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ಈ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಬಿಜೆಪಿಯಿಂದ ಅತೀ ಹೆಚ್ಚು ದಿನ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೊದಲಿಗ ಎಂಬ ದಾಖಲೆ ಬರೆದಿದ್ದಾರೆ.

ಭಾರತದ ಪ್ರಧಾನಿಯಾಗಿ ಅತೀ ಹೆಚ್ಚು ದಿನ ಸೇವೆ ಸಲ್ಲಿಸಿದ ಪಟ್ಟಿಯಲ್ಲಿ ಮೊದಲ ಸ್ಥಾನ ಜವಾಹರ್ ಲಾಲ್ ನೆಹರುವಿಗೆ ಸಲ್ಲಲಿದೆ. ಎರಡನೇ ಸ್ಥಾನವನ್ನು ಇಂದಿರಾ ಗಾಂಧಿ ಅಲಂಕರಿಸಿದ್ದಾರೆ. 3ನೇ ಸ್ಥಾನದಲ್ಲಿ ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ಪಾತ್ರರಾಗಿದ್ದಾರೆ.  ನಾಲ್ಕನೇ ಸ್ಥಾನದಲ್ಲಿದ್ದ ಅಟಲ್ ಬಿಹಾರಿ ವಾಜಪೇಯಿ ಅವರನ್ನು  ನರೇಂದ್ರ ಮೋದಿ ಹಿಂದಿಕ್ಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!