ದೇಶ

ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ: ಪ್ರಧಾನಿ ಮೋದಿ

Srinivasamurthy VN

ನವದೆಹಲಿ: ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಿದ್ದು, ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ಇಂದು 74ನೇ ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, 'ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿ ಮರುಪರಿಶೀಲಿಸಲು ಈಗಾಗಲೇ ಸಮಿತಿಯನ್ನು ರಚಿಸಲಾಗಿದೆ.  ಸಮಿತಿ ತನ್ನ ವರದಿಯನ್ನು ಸಲ್ಲಿಸಿದ ಬಳಿಕ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.  

ಅಂತೆಯೇ ಮಹಿಳೆಯರಿಗೆ ಅವಕಾಶ ಸಿಕ್ಕಾಗಲೆಲ್ಲಾ ಭಾರತ ಹೆಮ್ಮೆ ಪಡುವಂತೆ ಮಾಡುತ್ತಿದ್ದಾರೆ. ಈ ಮೂಲಕ ಭಾರತವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ. ಇಂದು, ದೇಶವು ಅವರಿಗೆ ಸ್ವಯಂ ಉದ್ಯೋಗ ಮತ್ತು ಉದ್ಯೋಗದ ಸಮಾನ ಅವಕಾಶಗಳನ್ನು ನೀಡುತ್ತಿದೆ. ದೇಶದಲ್ಲಿಂದು ಮಹಿಳೆಯರು ಕಲ್ಲಿದ್ದಲು ಗಣಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ, ನಮ್ಮ ದೇಶದ ಹೆಣ್ಣುಮಕ್ಕಳು ಯುದ್ಧ ವಿಮಾನವನ್ನು ಹಾರಿಸುವಾಗ ಆಗಸ ಮುಟ್ಟುತ್ತಿದ್ದಾರೆ. ದೇಶದ ಮಹಿಳೆಯರು, ಮಕ್ಕಳ ಮೇಲೆ ನನಗೆ ಪೂರ್ಣ ನಂಬಿಕೆಯಿದೆ. 

ನಾವು ‘ಆತ್ಮ ನಿರ್ಭರ ಭಾರತ’ ಸಾಧಿಸಬಲ್ಲೆವು. ಒಮ್ಮೆ ನಾವು ಏನನ್ನಾದರೂ ಮಾಡಲು ನಿರ್ಧರಿಸಿದರೆ, ನಾವು ಆ ಗುರಿಯನ್ನು ಸಾಧಿಸುವವರೆಗೆ ನಾವು ವಿಶ್ರಾಂತಿ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

SCROLL FOR NEXT