ದೇಶ

ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಭೀಕರ ಅಪಘಾತ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಐವರು ಸಾವು

Nagaraja AB

ಗುಜರಾತ್: ನಾಡಿಯಾಡ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-8ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ್ದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಮೃತಪಟ್ಟಿದ್ದಾರೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ನಜುಗುಜ್ಜಾಗಿವೆ. ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು  ನಾಡಿಯಡ್  ಅಗ್ನಿಶಾಮಕ ಅಧೀಕ್ಷಕ ದೀಕ್ಷಿತ್ ಪಟೇಲ್ ತಿಳಿಸಿದ್ದಾರೆ.

SCROLL FOR NEXT