ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 63,489 ಕೇಸ್ ಪತ್ತೆ, 25.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 49,980 ಮಂದಿ ಬಲಿ

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ಇನ್ನು ಒಂದೇ ದಿನ 944 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 49,980ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಮಾಡಿದೆ. 

ಈ ನಡುವೆ 25,89,682 ಮಂದಿ ಸೋಂಕಿತರ ಪೈಕಿ 18,62,258 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 6,77,444 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 7,46,608 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 7,46,608 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 15 ರವರೆಗೂ 2,93,09,703 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್