ದೇಶ

ವಿದೇಶದಿಂದ ಆಗಮಿಸುವವರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷಾ ಸೌಲಭ್ಯ ಸಾಧ್ಯತೆ

Srinivas Rao BV

ನವದೆಹಲಿ: ವಿದೇಶದಿಂದ ಆಗಮಿಸುವವರಿಗೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷಾ ಸೌಲಭ್ಯ ಪ್ರಾರಂಭವಾಗಲಿದೆ. 

ಪ್ರಯಾಣಿಕರಿಗೆ ಕೋವಿಡ್-19 ವರದಿ ನೆಗೆಟೀವ್ ಬಂದಲ್ಲಿ 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯ್ತಿ ಸಿಗಲಿದೆ. 

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ವಿದೇಶದಿಂದ ಬಂದ ಪ್ರಯಾಣಿಕರು ಕಡ್ಡಾಯವಾಗಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ಗೆ ಒಳಪಡಬೇಕಿದೆ. 

"ದೆಹಲಿ ವಿಮಾನ ನಿಲ್ದಾಣದಲ್ಲಿ ಸರ್ಕಾರ ಕೋವಿಡ್-19 ಟೆಸ್ಟಿಂಗ್ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಿದೆ.  8 ಗಂಟೆಗಳ ಅವಧಿಯಲ್ಲಿ ಪ್ರಯಾಣಿಕರಿಗೆ ವರದಿ ಲಭ್ಯವಾಗಲಿದೆ. ಅಷ್ಟು ಅವಧಿ ಪ್ರಯಾಣಿಕರು ವಿಮಾನ ನಿಲ್ದಾಣದ ಪ್ರಾಂಗಣದಲ್ಲೇ ಉಳಿಯಬೇಕಾಗುತ್ತದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಪ್ರಯಾಣಿಕರಿಗೆ ಸೋಂಕು ಪರೀಕ್ಷೆ ನೆಗೆಟೀವ್ ಬಂದರೆ ಸಾಂಸ್ಥಿಕ ಕ್ವಾರಂಟೈನ್ ನಿಂದ ಮುಕ್ತಿ ದೊರೆಯಲಿದೆ ಎಂದು ಸರ್ಕಾರಿ ಅಧಿಕಾರಿ ಹೇಳಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಮಾ.23 ರಿಂದ ಈ ವರೆಗೂ ಅಂತಾರಾಷ್ಟ್ರೀಯ ವಿಮಾನಗಳು ರದ್ದಾಗಿದೆ. 

SCROLL FOR NEXT