ಸಾಂದರ್ಭಿಕ ಚಿತ್ರ 
ದೇಶ

ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದು ವೈದ್ಯೆ ನೇಣಿಗೆ ಶರಣು

ವೈದ್ಯರೊಬ್ಬರು ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ನಾಗಪುರ:  ವೈದ್ಯರೊಬ್ಬರು ಪತಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗಪುರ ನಗರದಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಡಾ. ಸುಷ್ಮಾ ರಾಣೆ, ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದ ಪತಿ ಧೀರಜ್ (42) ಮತ್ತು ಅವರ 11 ಮತ್ತು 5 ವರ್ಷದ ಇಬ್ಬರು ಮಕ್ಕಳು ನಾಗಪುರದ ಕೊರಡಿ ಪ್ರದೇಶದಲ್ಲಿರುವ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಧೀರಜ್ ಮತ್ತು ಮಕ್ಕಳ ಮೃತದೇಹಗಳು ಮಾಸ್ಟರ್ ಬೆಡ್‌ರೂಂನ ಹಾಸಿಗೆಯ ಮೇಲೆ ಪತ್ತೆಯಾಗಿದ್ದರೆ, ವೈದ್ಯರ ಮೃತದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಕೊರಡಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ವೈದ್ಯ ಕುಟುಂಬದ ಜೊತೆ ವಾಸವಾಗಿದ್ದ ಮೃತನ 60 ವರ್ಷದ ಚಿಕ್ಕಮ್ಮ  ಬೆಡ್ ರೂಂ ಬಾಗಿಲು ಬಡಿದಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಸಾವಿಗೀಡಾಗಿರುವುದು ಬೆಳಕಿಗೆ ಬಂದಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. 

ಘಟನಾ ಸ್ಥಳದಿಂದ ಪೊಲೀಸರು, ಎರಡು ಸಿರಿಂಜ್ ಮತ್ತು ಡೆತ್‌ನೋಟ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಸುಷ್ಮಾ ಅವರು  ಯಾವುದೋ ವಿಚಾರಕ್ಕೆ ಅಸಮಾಧಾನಗೊಂಡಿದ್ದರಿಂದಾಗಿ ಈ ರೀತಿಯ ಹೆಜ್ಜೆಯನ್ನು ಇಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!