ದೇಶ

'ಸುಪ್ರೀಂ' ಆದೇಶ ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಬಲಗೊಳಿಸಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ: ಫಡ್ನವೀಸ್

Manjula VN

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಸಿಬಿಐ ತನಿಖೆ ಆದೇಸ ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆಯನ್ನು ಮತ್ತಷ್ಟು ಬಲಗೊಳ್ಳುವಂತೆ ಮಾಡಿದ್ದು, ಮಹಾರಾಷ್ಟ್ರ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಹಾರಾಷ್ಟ್ರ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸುಪ್ರೀಂಕೋರ್ಟ್ ಆದೇಶ ನ್ಯಾಯಾಂಗ ವ್ಯವಸ್ಥೆ ಮೇಲಿನ ನಂಬಿಕೆಯನ್ನು ಬಲಗೊಳಿಸಿದೆ. ಇದೀಗ ಮಹಾರಾಷ್ಟ್ರ ಸರ್ಕಾರ ಪ್ರಕರಣದ ತನಿಖೆ ಮಾಡಿದ ರೀತಿಯನ್ನು ಅತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ. 

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ ಸಂಬಂಧ ಮಹತ್ವದ ಆದೇಶ ನೀಡಿರುವ ಸುಪ್ರೀಂಕೋರ್ಟ್, ಸಾವಿನ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದಕ್ಕೆ ಸಂಬಂಧಪಟ್ಟ ಎಲ್ಲಾ ಸಾಕ್ಷಿಗಳು, ದಾಖಲೆಗಳನ್ನು ಮುಂಬೈ ಪೊಲೀಸರು ಸಿಬಿಐಗೆ ಹಸ್ತಾಂತರಿಸುವಂತೆ ತಿಳಿಸಿದೆ. 

SCROLL FOR NEXT