ಸುಶಾಂತ್ ಸಿಂಗ್ ರಜಪೂತ್ 
ದೇಶ

ಸುಶಾಂತ್ ಸಿಂಗ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಆದೇಶ- ತೀರ್ಪು ಸ್ವಾಗತಿಸಿದ ಬಾಲಿವುಡ್

ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ವಹಿಸಿ ಮಹತ್ವದ ಆದೇಶ ಹೊರಡಿಸಿದ್ದು, ನ್ಯಾಯಾಲಯದ ತೀರ್ಪವನ್ನು ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಸ್ವಾಗತಿಸಿದ್ದಾರೆ. 

ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣವನ್ನು ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ವಹಿಸಿ ಮಹತ್ವದ ಆದೇಶ ಹೊರಡಿಸಿದ್ದು, ನ್ಯಾಯಾಲಯದ ತೀರ್ಪವನ್ನು ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಸ್ವಾಗತಿಸಿದ್ದಾರೆ. 

ಸುಪ್ರೀಂಕೋರ್ಟ್ ತೀರ್ಪು ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ನಟಿ ಪರಿಣಿತಿ ಚೋಪ್ರಾ ಅವರು, ನ್ಯಾಯಾಲಯದ ಆದೇಶ ಧನಾತ್ಮಕ ಬೆಳವಣಿಗೆಯಾಗಿದೆ. ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದ್ದು, ಈಗಲಾದರು ಜನರು ವದಂತಿ ಹಬ್ಬುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. 

ನಿರ್ಮಾಪಕ ಅಶೋಕ್ ಪಂಡಿತ್ ಅವರು ಟ್ವೀಟ್ ಮಾಡಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದ ಸುಶಾಂತ್ ಕುಟುಂಬಸ್ಥರಿಗೆ ಹಾಗೂ ಕೋಟ್ಯಾಂತರ ಭಾರತೀಯರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 

ನಟ ತುಶಾರ್ ಕಪೂರ್ ಟ್ವೀಟ್ ಮಾಡಿದ, ಶೀಘ್ರದಲ್ಲೇ ಸತ್ಯಾಸತ್ಯತೆಗಳು ಬಹಿರಂಗಗೊಳ್ಳಲಿದೆ. ಸುಶಾಂತ್ ಆತ್ಮಹತ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ. 

ತೀರ್ಪನ್ನು ಸುಶಾಂತ್‌ ಸೋದರಿ ಮೀತು ಸಿಂಗ್‌, ನಟಿ ಅಂಕಿಯಾ ಲೋಖಂಡೆ, ಕಂಗನಾ ರನೌತ್ ಸೇರಿದಂತೆ ಹಲವು ಮಂದಿ ತೀರ್ಪು ಸ್ವಾಗತಿಸಿ ಟ್ವೀಟಿಸಿದ್ದಾರೆ.

ಈ ನಡುವೆ ಸುಪ್ರೀಂ ಕೋರ್ಟ್‌ ಆದೇಶ ಪ್ರಕಟವಾಗುತ್ತಿದ್ದಂತೆಯೇ ಸಿಬಿಐ ಟೇಕ್ಸ್‌ ಓವರ್‌ ಹ್ಯಾಷ್‌ ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್