ದೇಶ

ಚುನಾವಣೆ ಮುಂದೂಡದಿದ್ದರೇ ಮತಗಟ್ಟೆಗಳು ಕೊರೋನಾ ಕೇಂದ್ರಗಳಾಗಲಿವೆ: ಯಶವಂತಾ ಸಿನ್ಹಾ

Shilpa D

ಪಾಟ್ನಾ: ದೇಶದೆಲ್ಲೆಡೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕು ಎಂದು ಮಾಜಿ ಕೇಂದ್ರ ಸಚಿವ ಯಶವಂತಾ ಸಿನ್ಹಾ ಆಗ್ರಹಿಸಿದ್ದಾರೆ.

ಕೊರೋನಾದಿಂದಾಗಿ ರಾಜಕೀಯ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದರೆ, ಚುನಾವಣೆಯನ್ನು ಮುಂದೂಡಲು ಯಾವುದೇ ಕ್ರಮವನ್ನು ಕೈಗೊಂಡಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಲದೇ ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಈ ಅವಧಿಯಲ್ಲಿ ಚುನಾವಣೆ ನಡೆಸಿದರೆ ಮತಗಟ್ಟೆಗಳು ಕೊರೋನಾ ಕೇಂದ್ರಗಳಾಗಿ ಬದಲಾಗಬಹುದು, ಆಗ ಕೊರೋನಾ ಎಷ್ಟು ಪ್ರಮಾಣದಲ್ಲಿ ಹರಡಿದೆ ಎಂಬುದನ್ನು ಅಂದಾಜಿಸುವುದು ಬಹಳ ಕಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬಿಹಾರ ಸರ್ಕಾರವು ಚುನಾವಣಾ ಆಯೋಗದ ಮುಂದೆ ಕೊರೋನಾ ಪ್ರಕರಣಗಳು ಕಡಿಮೆಯಿದೆ ಎಂದು ತೋರಿಸಲು ನಿಜವಾದ ಅಂಕಿಅಂಶಗಳನ್ನು ಮರೆಮಾಚುತ್ತಿವೆ ಎಂದು ಆರೋಪಿಸಿರುವ ಸಿನ್ಹಾ, ಒಂದು ವೇಳೆ ನವೆಂಬರ್ ಅಂತ್ಯದ ಬಳಿಕ ಚುನಾವಣೆ ನಡೆದರೆ ಬಿಹಾರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಬರಬಹುದು. ಆಗ  ಮುಖ್ಯಮಂತ್ರಿ ಸ್ಥಾನ
ತ್ಯಜಿಸಬೇಕಾಗಬಹುದು ಎಂಬ ಭಯದಿಂದ ನಿತಿಶ್ ಕುಮಾರ್ ಚುನಾವಣೆ ಮುಂದೂಡಲು ಮನಸ್ಸು ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
 

SCROLL FOR NEXT