ದೇಶ

ಚುನಾವಣಾ ಆಯುಕ್ತರಾಗಿ ನಿವೃತ್ತ ಅಧಿಕಾರಿ ರಾಜೀವ್ ಕುಮಾರ್ ನೇಮಕ

Nagaraja AB

ನವದೆಹಲಿ: ಅಶೋಕ್ ಲವಾಸಾ ರಾಜೀನಾಮೆಯಿಂದ ತೆರವಾಗಿದ್ದ ಚುನಾವಣಾ ಆಯುಕ್ತ ಸ್ಥಾನಕ್ಕೆ ನಿವೃತ್ತ ಐಎಎಸ್  ಅಧಿಕಾರಿ ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಆಗಸ್ಟ್  31ಕ್ಕೆ ಲವಾಸಾ  ಸೇವೆ ಅಂತ್ಯವಾಗಲಿದ್ದು, ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕಾತಿ ಮಾಡಿದ್ದಾರೆ.

ಸಂವಿಧಾನದ 324ನೇ ವಿಧಿಯ ಉಪವಿಧಿ (2) ರ ಅನ್ವಯ ಆಗಸ್ಟ್ 31ಕ್ಕೆ ಕೊನೆಗೊಳ್ಳುವ ಲವಾಸಾ ಅವರ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ರಾಜೀವ್ ಕುಮಾರ್ 1984ರ ಬ್ಯಾಚಿನ್ ಜಾರ್ಖಂಡ್ ಕೇಡರ್ ನ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದಾರೆ.

SCROLL FOR NEXT