ಜಮ್ಮು-ಕಾಶ್ಮೀರ: ವಿಶೇಷ ಸ್ಥಾನಮಾನ, ರಾಜ್ಯ ಸ್ಥಾನಮಾನಕ್ಕಾಗಿ ಒಟ್ಟಾದ 6 ರಾಜಕೀಯ ಪಕ್ಷಗಳು! 
ದೇಶ

ಜಮ್ಮು-ಕಾಶ್ಮೀರ: ವಿಶೇಷ ಸ್ಥಾನಮಾನ, ರಾಜ್ಯ ಸ್ಥಾನಮಾನಕ್ಕಾಗಿ ಒಟ್ಟಾದ 6 ರಾಜಕೀಯ ಪಕ್ಷಗಳು! 

ಮಹತ್ವದ  ಬೆಳವಣಿಗೆಯೊಂದರಲ್ಲಿ ಜಮ್ಮು-ಕಾಶ್ಮೀರದ ಆರು ಪಕ್ಷಗಳು ಮೈತ್ರಿಗೆ ಮುಂದಾಗಿವೆ. 

ಶ್ರೀನಗರ: ಮಹತ್ವದ  ಬೆಳವಣಿಗೆಯೊಂದರಲ್ಲಿ ಜಮ್ಮು-ಕಾಶ್ಮೀರದ ಆರು ಪಕ್ಷಗಳು ಮೈತ್ರಿಗೆ ಮುಂದಾಗಿವೆ. 

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡುವುದು ಹಾಗೂ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ಮೈತ್ರಿಯ ಹಿಂದಿನ ಉದ್ದೇಶವಾಗಿದೆ. 

ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಪಿಡಿಪಿ, ಪೀಪಲ್ಸ್ ಕಾನ್ಫರೆನ್ಸ್, ಸಿಪಿಎಂ, ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ ಸಿ) ಮೈತ್ರಿ ಮಾಡಿಕೊಂಡಿದ್ದು, 2019, ಆ.04 ರ ಗುಪ್ಕರ್ ಡಿಕ್ಲೆರೇಷನ್ ಗೆ ಬದ್ಧವಾಗಿ, ಆರ್ಟಿಕಲ್ 370 ಮರು ಸ್ಥಾಪನೆ, ಹಾಗೂ ರಾಜ್ಯಸ್ಥಾನಮಾನ ಮರಳಿ ತರುವುದಕ್ಕೆ ಹೋರಾಡುವುದಾಗಿ ಜಂಟಿ ಪತ್ರಿಕಾ ಹೇಳಿಕೆಯ ಮೂಲಕ 6 ಪಕ್ಷಗಳು ತಿಳಿಸಿವೆ. 

ಜಂಟಿ ಹೇಳಿಕೆಯಲ್ಲಿ ಆ.05 ರ ಆರ್ಟಿಕಲ್ 370 ರದ್ದತಿ ಹಾಗೂ ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕ್ರಮ ದುರದೃಷ್ಟಕರ ಎಂದು ಹೇಳಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!