ಪ್ರಶಸ್ತಿ ವಿಜೇತ ಶಿಕ್ಷಕರು 
ದೇಶ

ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ

2020ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಘೋಷಣೆಯಾಗಿದ್ದು ಕರ್ನಾಟಕದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ.

ನವದೆಹಲಿ: 2020ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಘೋಷಣೆಯಾಗಿದ್ದು ಕರ್ನಾಟಕದ ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ.

ಬೆಳ್ತಂಗಡಿ ತಾಲೂಕು ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್, ಕಲಬುರಗಿಯ ಅಫ್ಷಲ್ ಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್ ಎನ್ನುವ ಇಬ್ಬರು ಶಿಕ್ಷಕರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿಕ್ಷಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ಆಯ್ಕೆ ಪಟ್ಟಿ ಪ್ರಕಟ ಮಾಡಿದ್ದು ಒಟ್ಟು 47 ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ 7 ಸಾಂಸ್ಥಿಕ ಆಯ್ಕೆ ಸಮಿತಿ ಒಟ್ಟೂ 153 ಶಿಕ್ಷಕರ ಅರ್ಜಿಪರಿಶೀಲಿಸಿ ಈ ಪ್ರಶಸ್ತಿ ಪಟ್ಟಿ ತಯಾರಿಸಿದೆ,

ಇನ್ನು ಬೆಂಗಳೂರಿನ ಕೇಂದ್ರೀಯ ವಿದ್ಯಾಲಯ ಸಂಘಟನ್ ನ ಶಿಕ್ಷಕ  ಚೆಮ್ಮಲರ್ ಷಣ್ಮುಗನ್ ಅವರಿಗೂ ಪ್ರಶಸ್ತಿ ಒಲಿದು ಬಂದಿದೆ.

ಪ್ರಶಸ್ತಿ ವಿಜೇತರ ಪೈಕಿ ಉತ್ತರ ಪ್ರದೇಶ ಹಾಗೂ ಗುಜರಾತ್ ನ ತಲಾ ಮೂವರು, , ಮಧ್ಯಪ್ರದೇಶ, ಬಿಹಾರ, ಒಡಿಸ್ಸಾ, ಪಶ್ಚಿಮ ಬಂಗಾಲ, ಜಾರ್ಖಂಡ್ ಮತ್ತು ತಮಿಳುನಾಡು, ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ತಲಾ ಇಬ್ಬರು, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಉತ್ತರಾಖಂಡ, ರಾಜಸ್ಥಾನ, ಗೋವಾ, ಮಹಾರಾಷ್ಟ್ರ, ಪುದುಶ್ಯೇರಿ,  ಛತ್ತೀಸ್ ಗಢ, ಮೇಘಾಲಯ, ತ್ರಿಪುರ, ಅಸ್ಸಾಂ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶ ಲಢಾಕ್ ನ ತಲಾ ಒಬ್ಬ ಶಿಕ್ಷಕರುಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT