ಕೋವಿಡ್-19 ಲಸಿಕೆ ಕುರಿತ ಮಾಹಿತಿಗಾಗಿ ಪೋರ್ಟಲ್ ಅಭಿವೃದ್ಧಿಪಡಿಸುತ್ತಿರುವ ಐಸಿಎಂಆರ್
ದೇಶ ಹಾಗೂ ವಿದೇಶದಲ್ಲಿ ಕೋವಿಡ್-19 ಲಸಿಕೆ ಅಭಿವೃದ್ಧಿ ಕುರಿತ ಮಾಹಿತಿ ನೀಡಲು ಪೋರ್ಟಲ್ ವೊಂದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಅಭಿವೃದ್ಧಿಪಡಿಸುತ್ತಿದ್ದು, ಇದರ ಕಾರ್ಯ ಪ್ರಗತಿಯಲ್ಲಿದೆ.
ನವದೆಹಲಿ: ದೇಶ ಹಾಗೂ ವಿದೇಶದಲ್ಲಿ ಕೋವಿಡ್-19 ಲಸಿಕೆ ಅಭಿವೃದ್ಧಿ ಕುರಿತ ಮಾಹಿತಿ ನೀಡಲು ಪೋರ್ಟಲ್ ವೊಂದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಅಭಿವೃದ್ಧಿಪಡಿಸುತ್ತಿದ್ದು, ಇದರ ಕಾರ್ಯ ಪ್ರಗತಿಯಲ್ಲಿದೆ. ಇಂಗ್ಲೀಷ್ ಜೊತೆಗೆ ಇತರ ಪ್ರಾದೇಶಿಕ ಭಾಷೆಗಳಲ್ಲೂ ಲಸಿಕೆ ಅಭಿವೃದ್ಧಿಯಲ್ಲಿ ಆಗುತ್ತಿರುವ ಮಾಹಿತಿಯನ್ನು ಪೋರ್ಟಲ್ ನಲ್ಲಿ ನೀಡಲಾಗುತ್ತದೆ.
ಕೋವಿಡ್-19 ಲಸಿಕೆ ಅಭಿವೃದ್ಧಿ ಸಂಬಂಧಿತ ಮಾಹಿತಿಯನ್ನು ನೀಡುವ ಉದ್ದೇಶದಿಂದ ಪೋರ್ಟಲ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಐಸಿಎಂಆರ್ ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥ ಸಮಿರನ್ ಪಾಂಡ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಾದೇಶಿಕ ಭಾಷೆಗಳ ಮೂಲಕ ಪ್ರತಿಯೊಬ್ಬ ನಾಗರಿಕರಿಗೂ ಮಾಹಿತಿಯನ್ನು ನೀಡಲಾಗುವುದು, ಮುಂದಿನ ವಾರದಿಂದ ಈ ಪೋರ್ಟಲ್ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ.
ಮೊದಲ ಹಂತದಲ್ಲಿ ದೇಶ, ವಿದೇಶಗಳಲ್ಲಿನ ಕೋವಿಡ್ ಲಸಿಕೆಗೆ ಸಂಬಂಧಿತ ಮಾಹಿತಿ ನೀಡಲಾಗುವುದು, ಇತರ ಕಾಯಿಲೆಗಳನ್ನು ತಡೆಗಟ್ಟುವ ಇತರ ಲಸಿಕೆಗಳ ಬಗ್ಗೆ ಮಾಹಿತಿಯನ್ನು ಪೋರ್ಟಲ್ ನಲ್ಲಿ ಹಾಕಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.