ಡಿಆರ್‌ಡಿಒ ಮುಖ್ಯಸ್ಥ ಜಿ.ಸತೀಶ್‌ ರೆಡ್ಡಿ 
ದೇಶ

ಡಿಆರ್‌ಡಿಒ ಮುಖ್ಯಸ್ಥ ಜಿ.ಸತೀಶ್‌ ರೆಡ್ಡಿ ಕಾರ್ಯಾವಧಿ 2 ವರ್ಷ ವಿಸ್ತರಣೆ: ಕೇಂದ್ರ ಸರ್ಕಾರ

ಪ್ರಮುಖ ಬೆಳವಣಿಗೆಯಲ್ಲಿ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಜಿ.ಸತೀಶ್‌ ರೆಡ್ಡಿ ಅವರ ಕಾರ್ಯಾವಧಿಯನ್ನು ಕೇಂದ್ರ ಸರ್ಕಾರ ಇನ್ನೂ 2 ವರ್ಷಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಜಿ.ಸತೀಶ್‌ ರೆಡ್ಡಿ ಅವರ ಕಾರ್ಯಾವಧಿಯನ್ನು ಕೇಂದ್ರ ಸರ್ಕಾರ ಇನ್ನೂ 2 ವರ್ಷಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.

ವಿಜ್ಞಾನಿ ಜಿ.ಸತೀಶ ರೆಡ್ಡಿ ಅವರಿಗೆ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥರ ಜವಾಬ್ದಾರಿಯನ್ನು ಎರಡು ವರ್ಷಗಳು ವಿಸ್ತರಿಸಿ ಸೋಮವಾರ ಕೇಂದ್ರ ಸರ್ಕಾರ ಆದೇಶಿಸಿದೆ. ಸಚಿವ ಸಂಪುಟದ ನೇಮಕಾತಿ ಮಂಡಳಿಯು ಸತೀಶ್‌ ರೆಡ್ಡಿ ಅವರನ್ನು ಡಿಆರ್‌ಡಿಒ ಅಧ್ಯಕ್ಷರು ಹಾಗೂ ರಕ್ಷಣಾ  ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ಮುಂದಿನ ಎರಡು ವರ್ಷಗಳು ಮುಂದುವರಿಸಲು ಅನುಮೋದನೆ ನೀಡಿದೆ. 2018ರ ಆಗಸ್ಟ್‌ನಲ್ಲಿ ಸತೀಶ್‌ ರೆಡ್ಡಿ ಅವರನ್ನು ಎರಡು ವರ್ಷಗಳ ಅವಧಿಗೆ ಡಿಆರ್‌ಡಿಒ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. 

ಮೂಲತಃ ಆಂಧ್ರ ಪ್ರದೇಶದವರಾದ ಸತೀಶ್ ರೆಡ್ಡಿ ಅವರು, ಅನಂತಪುರದ ಜವಹರಲಾಲ್‌ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ (ಜೆಎನ್‌ಟಿಯು) ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. ಹೈದರಾಬಾದ್‌ ಜೆಎನ್‌ಟಿಯುದಿಂದ ಎಂ.ಎಸ್ ಮತ್ತು ಪಿಎಚ್‌.ಡಿ ಪಡೆದಿದ್ದಾರೆ.  ವಿಜ್ಞಾನಿ ಡಾ. ಅಬ್ದುಲ್‌ ಕಲಾಂ ಅವರ ಕನಸಿನ ರಕ್ಷಣಾ ಸಂಶೋಧನಾ ಸಂಸ್ಥೆ ‘ರಿಸರ್ಚ್‌ ಸೆಂಟರ್‌ ಇಮಾನತ್‌’ನಲ್ಲಿ ವಿಜ್ಞಾನಿಯಾಗಿ ವೃತ್ತಿಜೀವನ ಆರಂಭಿಸಿದರು. 2015ರ ಮೇನಲ್ಲಿ ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿ ನೇಮಕಗೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!