ದೇಶ

ರಾಹುಲ್ ಗಾಂಧಿ ತಪ್ಪು ಮಾಡಿದ್ದಾರೆ..!; ಎಐಸಿಸಿ ಕೆಲವು ನಾಯಕರು ಬಿಜೆಪಿ ಜೊತೆ ಸಖ್ಯ ಹೊಂದಿದ್ದಾರೆ: ಮಾಜಿ ಸಂಸದೆ ರಮ್ಯಾ ಗಂಭೀರ ಆರೋಪ

ರಾಷ್ಟ್ರೀಯ ಕಾಂಗ್ರೆಸ್‌ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮಂಡ್ಯದ ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಕೆಲವು ನಾಯಕರು ಬಿಜೆಪಿ ಜೊತೆ ಸಖ್ಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್‌ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಮಂಡ್ಯದ ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಕೆಲವು ನಾಯಕರು ಬಿಜೆಪಿ ಜೊತೆ ಸಖ್ಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ರಮ್ಯಾ, ಪಕ್ಷದ ನಾಯಕತ್ವದ ಬಗ್ಗೆ ಧ್ವನಿ ಎತ್ತಿರುವ ಹಿರಿಯ ಮುಖಂಡರ ವಿರುದ್ಧ ಕಿಡಿಕಾರಿರುವ ರಮ್ಯಾ ರಾಹುಲ್ ಗಾಂಧಿ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. 'ಎಐಸಿಸಿಯ ಕೆಲವು ನಾಯಕರು ಬಿಜೆಪಿ ಜೊತೆ ಅಷ್ಟೇ ಅಲ್ಲ ಮಾಧ್ಯಮಗಳ ಜೊತೆಯೂ ಸೇರಿಕೊಂಡಿದ್ದಾರೆ.  ರಾಹುಲ್ ಗಾಂಧಿಯವರು ಪಕ್ಷದ ನಾಯಕರು ಕೇವಲ ಬಿಜೆಪಿ ಜೊತೆಗೆ ಸೇರಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಅವರೆಲ್ಲ ಬಿಜೆಪಿಯ ಜೊತೆ ಅಷ್ಟೇ ಅಲ್ಲದೇ ಮಾಧ್ಯಮಗಳೊಂದಿಗೂ ಸೇರಿ ಕೊಂಡಿದ್ದಾರೆ. ಹೀಗಾಗಿ ಎಐಸಿಸಿ ಕಾರ್ಯಕಾರಿಣಿ ನಡೆಯುತ್ತಿರುವ ಸಂದರ್ಭದಲ್ಲಿಯೇ ಒಳಗಡೆ ನಡೆಯುತ್ತಿರುವ  ಚರ್ಚೆ ನೇರವಾಗಿ ಮಾಧ್ಯಮಗಳಲ್ಲಿ ಬಿತ್ತರವಾಗುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ರಮ್ಯಾ ಆರೋಪಿಸಿದ್ದಾರೆ. 

ಹಿರಿಯ ಮುಖಂಡರು ಸೋನಿಯಾ ಗಾಂಧಿಗೆ ಬರೆದ ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದುದಷ್ಟೇ ಅಲ್ಲ, ಅವರು ಸಿಡಬ್ಲ್ಯುಸಿ ಸಭೆಯ ಪ್ರತಿಯೊಂದು ಮಾತುಕತೆಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದನ್ನು ಮುಂದುವರಿಸುತ್ತಾರೆ. ಅದ್ಭುತ!.. ಅಲ್ಲದೆ ರಾಹುಲ್ ಅವರು ತಪ್ಪು ಮಾಡಿದ್ದಾರೆ ಎಂದು  ನಾನು ಭಾವಿಸುತ್ತೇನೆ. ಹಿರಿಯ ಮುಖಂಡರು ಬಿಜೆಪಿ ಜೊತೆಗೆ ಮಾತ್ರವಲ್ಲ, ಬಿಜೆಪಿ ಮತ್ತು ಮಾಧ್ಯಮಗಳೊಂದಿಗೆ ಕೈಜೋಡಿಸುವ ಮೂಲಕ ಅವರು ಹೇಳಬೇಕಿತ್ತು ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್