ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಾರಾಷ್ಟ್ರ: ಮಹದ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿತ, ಅವಶೇಷಗಳಡಿ 70 ಮಂದಿ ಸಿಲುಕಿರುವ ಶಂಕೆ

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕಟ್ಟಡದ ಅವೇಶಗಳಡಿ ಸುಮಾರು 70ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಕುಸಿದುಬಿದ್ದ ಕಟ್ಟಡದ ಅವಶೇಷ
Lingaraj Badiger
Updated On : 24 Aug 2020, 9:24 pm

ರಾಯಗಡ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕಟ್ಟಡದ ಅವೇಶಗಳಡಿ ಸುಮಾರು 70ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬಹುಮಹಡಿ ಕಟ್ಟಡದ ಮೂರು ಮಹಡಿಗಳು ಕುಸಿದುಬಿದ್ದ ನಂತರ ಇದುವರೆಗೆ 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಸಚಿವ ಅದಿತಿ ಎಸ್ ತತ್ಕರೆ ಅವರು ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಬಹುಮಹಡಿ ಕಟ್ಟಡದೊಳಗೆ ಸುಮಾರು 200 ಮಂದಿ ಸಿಲುಕಿರುವ ಸಾಧ್ಯತೆ ಇದೆ ತತ್ಕರೆ ಅವರು ತಿಳಿಸಿದ್ದಾರೆ.

Advertisement

Advertisement

ಇದುವರೆಗೆ 15 ಜನರನ್ನು ರಕ್ಷಿಸಲಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಐದು ರಕ್ಷಣಾ ತಂಡಗಳಿದ್ದು, ಹೆಚ್ಚಿನ ರಕ್ಷಣಾ ತಂಡಗಳು ಬರುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.

ಮಹದ್ ಕಜಲಪುರ್ ಪ್ರದೇಶದಲ್ಲಿರುವ ಈ ಬಹುಮಹಡಿ ಕಟ್ಟದಲ್ಲಿ 45 ಫ್ಲಾಟ್ ಗಳು ಇದ್ದು, ಸುಮಾರು 100 ಜನ ವಾಸವಾಗಿದ್ದರು. ಇಂದು ಸಂಜೆ 7 ಗಂಟೆಯ ಸುಮಾರಿಗೆ ಕಟ್ಟಡ ಕುಸಿದು ಬಿದ್ದಿದೆ ಎಂದು ರಾಯಗಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement