ದೇಶ

ಮಹಾರಾಷ್ಟ್ರ; 5 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ; ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ

Manjula VN

ರಾಯಗಡ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದ ಪರಿಣಾಮ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಮಂಗಳವಾರ ತಿಳಿದುಬಂದಿದೆ. 

ಬಹುಮಹಡಿ ಕಟ್ಟಡ ಕುಸಿದು ಬೀಳುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚಣೆ ನಡೆಸಿದ್ದು, ಗಾಯಗೊಂಡಿದ್ದ 18 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. 

ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ 70ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ಇದರಲ್ಲಿ 10 ವರ್ಷದ ಮಗು ಕೂಡ ಇದೆ ಎಂದು ಹೇಳಲಾಗುತ್ತಿದೆ. 

ಕಟ್ಟಡಲ್ಲಿ 45 ಫ್ಲ್ಯಾಟ್ ಗಳಿದ್ದು, ಅವಶೇಷಗಳಡಿ ಸಿಲುಕಿಕೊಂಡಿದ್ದ 25 ಮಂದಿನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಇದೀಗ ಎನ್'ಡಿಆರ್'ಎಫ್ ಪಡೆಗಳು ಕೂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. 

ಘಟನೆ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಎನ್'ಡಿಆರ್'ಎಫ್ ಪಡೆಗಳೂ 25 ಮಂದಿಯನ್ನು ರಕ್ಷಣೆ ಮಾಡಿದ್ದು, ಘಟನೆಗೆ ನಿಖರ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಸಿಎಂ ಠಾಕ್ರೆಯವರು ಈಗಾಗಲೇ ಕರೆ ಮಾಡಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಹಾಗೂ ಜನರಿಗೆ ಅಗತ್ಯ ಪರಿಹಾರಗಳನ್ನು ನೀಡುವಂತೆ ಸೂಚಿಸಿದ್ದಾರೆ. ಸ್ಥಳದಲ್ಲಿ ಸೂಕ್ತ ವಿದ್ಯುತ್ ಲೈಟ್ ಗಳ ವ್ಯವಸ್ಥೆಗಳಿಲ್ಲದ ಕಾರಣ ಜನರೇಟರ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಎಂದು ಶಿವಸೇನೆ ಶಾಸಕ ಭರತ್ ಗೋವಾಲೆಯವರು ಹೇಳಿದ್ದಾರೆ.

SCROLL FOR NEXT