ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಎರಡನೇ ಇನ್ನಿಂಗ್ಸ್ ಆರಂಭಿಸುತ್ತಿರುವ ಅಣ್ಣಾಮಲೈ! ತಮಿಳುನಾಡು ಬಿಜೆಪಿಗೆ ಸೇರ್ಪಡೆ

ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ .ಅಣ್ಣಾಮಲೈ ಬಿಜೆಪಿ ಸೇರಲಿದ್ದಾರೆ.ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ
Nagaraja AB
Updated On : 25 Aug 2020, 9:21 am

ಚೆನ್ನೈ: ಕರ್ನಾಟಕದಲ್ಲಿ ಸಿಂಗಂ ಎಂದೇ ಖ್ಯಾತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ .ಅಣ್ಣಾಮಲೈ  ಬಿಜೆಪಿ ಸೇರಲಿದ್ದಾರೆ.ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತನ್ನ ತೆಕ್ಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಕರ್ನಾಟಕದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಅಣ್ಣಾಮಲೈ, 2019ರಲ್ಲಿ ಸೇವೆಗೆ ರಾಜೀನಾಮೆ ಸಲ್ಲಿಸುವ ಮೂಲಕ ಜನರ ನಡುವೆ ಕೆಲಸದಲ್ಲಿ ನಿರತರಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯತೆಯ ಪಕ್ಷವಾಗಿದ್ದು, ರಾಷ್ಟ್ರೀಯತೆಗೆ ಮೊದಲ ಆದ್ಯತೆ ನೀಡುತ್ತೇನೆ.ಬಿಜೆಪಿಯಿಂದ ತಮಿಳುನಾಡಿಗೆ ಹೊಸ ಮಾರ್ಗದರ್ಶನ ದೂರದೃಷ್ಟಿ ಸಿಗಲಿದೆ ಎಂಬುದಾಗಿ ಭಾವಿಸುವುದಾಗಿ ಅವರು ತಿಳಿಸಿದ್ದಾರೆ.

Advertisement

Advertisement

ಪೊಲೀಸ್ ಸೇವೆಗೆ ರಾಜೀನಾಮೆ ನೀಡಿದ ಬಳಿಕ ಅಣ್ಣಾಮಲೈ, ಕರೂರ್ ಮತ್ತು ಕೊಯಂಬತ್ತೂರಿನಲ್ಲಿ ಸಂಸ್ಥೆಯೊಂದರ ಮೂಲಕ ಕೃಷಿಕರೊಂದಿಗೆ ಕೆಲಸ ಮಾಡುತ್ತಿದ್ದಾರೆ. 

ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರುತ್ತಿದ್ದೇನೆ.ಸಾಮಾಜಿಕ ಬದಲಾವಣೆಗಿಂತ ರಾಜಕೀಯ ಬದಲಾವಣೆ ಪ್ರಮುಖವಾದದ್ದು ಅನ್ನಿಸುತ್ತಿದೆ.ಆದ್ದರಿಂದ ಬಿಜೆಪಿ ಸೇರುತ್ತಿರುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments