ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 60,975 ಕೇಸ್ ಪತ್ತೆ, 31 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 60,975 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 31 ಲಕ್ಷ ಗಡಿ ದಾಟಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 60,975 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 31 ಲಕ್ಷ ಗಡಿ ದಾಟಿದೆ. 

ಒಂದೇ ದಿನ 60,975 ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,67,324ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ 848 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 58,390ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಈ ನಡುವೆ 31,67,324 ಮಂದಿ ಸೋಂಕಿತರ ಪೈಕಿ 24,04,585 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 7,04,348 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರೆಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ