ಆಸ್ತಿ ವಿವಾದ: ಉತ್ತರ ಪ್ರದೇಶದಲ್ಲಿ ಗುಂಡಿಟ್ಟು ಪತ್ರಕರ್ತನ ಕಗ್ಗೊಲೆ
ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಲ್ಲಿಯಾ: ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರನ್ನು ಸೋಮವಾರ ರಾತ್ರಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ತಿ ವಿವಾದ ಹಿನ್ನೆಲೆಯಲ್ಲಿ ಪತ್ರಕರ್ತ ರತನ್ ಸಿಂಗ್ (45) ಎಂಬುವರನ್ನು ಕೊಲೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ.
ರತನ್ ಸಿಂಗ್ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪತ್ರಕರ್ತ ರತನ್ ಸಿಂಗ್ ಮತ್ತು ನೆರೆಯವರೊಂದಿಗೆ ಆಸ್ತಿ ವಿವಾದವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
'ರತನ್ ತನ್ನ ನೆರೆಯವರೊಂದಿಗೆ ಆಸ್ತಿ ವಿವಾದ ಹೊಂದಿದ್ದರು. ಸೋಮವಾರ ಸಂಜೆ ಎರಡೂ ಕಡೆಯವರ ನಡುವೆ ಜಗಳ ನಡೆದಿದೆ. ಕೊನೆಗೆ ನೆರೆಯವರು ರತನ್ ಅವರ ಮೇಲೆ ಗುಂಡು ಹಾರಿಸಿದ್ದಾರೆ.
ಆರೋಪಿ ದಿನೇಶ್ ಸಿಂಗ್ ರತನ್ ಸಿಂಗ್ ಅವರ ಆಸ್ತಿಯಲ್ಲಿ ಪಾಲುದಾರನಾಗಿದ್ದ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 2019ರಲ್ಲಿ ಎರಡೂ ಕಡೆಯವರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನೂ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.