ದೇಶ

ಯುಪಿ ಪತ್ರಕರ್ತನ ಹತ್ಯೆ: ಪೊಲೀಸ್ ಅಧಿಕಾರಿ ಅಮಾನತು, 6 ಆರೋಪಿಗಳ ಬಂಧನ

Lingaraj Badiger

ಬಲ್ಲಿಯಾ: ಉತ್ತರ ಪ್ರದೇಶದ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಮತ್ತು ಇದುವರೆಗೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಪತ್ರಕರ್ತ ರತನ್ ಸಿಂಗ್ ಅವರ ತಂದೆ 10 ಮಂದಿ ವಿರುದ್ಧ ದೂರು ನೀಡಿದ್ದು, ಆ ಪೈಕಿ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹತ್ಯೆಯಾದ ಪತ್ರಕರ್ತನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಆಸ್ತಿ ವಿವಾದ ಹಿನ್ನೆಲೆಯಲ್ಲಿ  ಪತ್ರಕರ್ತ ರತನ್‌ ಸಿಂಗ್‌ (45) ಎಂಬುವರನ್ನು ಕೊಲೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ.

ಪತ್ರಕರ್ತ ರತನ್‌ ಸಿಂಗ್‌ ಮತ್ತು ನೆರೆಯವರೊಂದಿಗೆ ಆಸ್ತಿ ವಿವಾದವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

'ರತನ್ ತನ್ನ ನೆರೆಯವರೊಂದಿಗೆ ಆಸ್ತಿ ವಿವಾದ ಹೊಂದಿದ್ದರು. ಸೋಮವಾರ ಸಂಜೆ ಎರಡೂ ಕಡೆಯವರ ನಡುವೆ ಜಗಳ ನಡೆದಿದೆ. ಕೊನೆಗೆ ನೆರೆಯವರು ರತನ್‌ ಅವರ ಮೇಲೆ ಗುಂಡು ಹಾರಿಸಿದ್ದಾರೆ. 

ಆರೋಪಿ ದಿನೇಶ್ ಸಿಂಗ್ ರತನ್ ಸಿಂಗ್ ಅವರ ಆಸ್ತಿಯಲ್ಲಿ ಪಾಲುದಾರನಾಗಿದ್ದ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 2019ರಲ್ಲಿ ಎರಡೂ ಕಡೆಯವರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನೂ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

SCROLL FOR NEXT