ದೇಶ

ಬಸ್ಸುಗಳ ಮುಖಾಮುಖಿ ಡಿಕ್ಕಿ: ಉತ್ತರ ಪ್ರದೇಶದಲ್ಲಿ ಆರು ಸಾವು, 12 ಮಂದಿಗೆ ಗಾಯ

Shilpa D

ಲಕ್ನೋ: ಮುಂದೆ ಚಲಿಸುತ್ತಿದ್ದ ಟ್ರಕ್ ಹಿಂದಕ್ಕೆ ಹಾಕುವ ಭರದಲ್ಲಿ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕನಿಷ್ಟ ೬ ಮಂದಿ ಪ್ರಯಾಣಿಕರು ಮೃತಪಟ್ಟು, ಇತರ ೨೦ ಮಂದಿ ಗಾಯಗೊಂಡಿರುವ ದುರ್ಘಟನೆ ಲಕ್ನೋ- ಹರದೋಯ್ ರಾಜ್ಯ ಹೆದ್ದಾರಿಯ ಬಜನ್ ಗರ್ ಸಮೀಪ ಬುಧವಾರ ಬೆಳಗ್ಗೆ ಸಂಭವಿಸಿದೆ.

ಅಪಘಾತಕ್ಕೀಡಾಗಿರುವ ಎರಡೂ ಬಸ್ಸುಗಳು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದಾಗಿವೆ. ಮುಂದೆ ಚಲಿಸುತ್ತಿದ್ದ ಟ್ರಕ್ ಹಿಂದೆ ಹಾಕಲು ಬಸ್ಸೊಂದು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ. ಬಸ್ ಹಿಂದೆ ಹಾಕಿದ್ದ ಟ್ರಕ್ ಸಹ ಬಸ್ಸುಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತದಲ್ಲಿ ಮೃತ ಪಟ್ಟವರನ್ನು ನಿತೀಶ್ ಭಾರತಿ, ಲಕ್ಕಿ ಸಕ್ಸೇನಾ, ಸರ್ವಘರ್, ಹರಿರಾಂ ಹಾಗೂ ಮಹಿಳೆಯೊಬ್ಬರ ಗುರುತು ಸಿಕ್ಕಿಲ್ಲ ಎಂದು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್ .ಎಂ. ಕಾಸಿಂ ತಿಳಿಸಿದ್ದಾರೆ. ಅಪಘಾತದಲ್ಲಿ ಎರಡೂ ಬಸ್ಸುಗಳ ನಿರ್ವಾಹಕರು ಇತರ ಪ್ರಯಾಣಿಕರೊಂದಿಗೆ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ರಾಜಧಾನಿ ಲಕ್ನೋದ
ತೀವ್ರ ಗಾಯಾಳುಗಳ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಗಿದೆ. 

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈ ನಡುವೆ ಯುಪಿಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಜಶೇಖರ್ ಅಪಘಾತದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶ ನೀಡಿದ್ದು, ಉನ್ನತ ಅಧಿಕಾರಿಗಳ ತಂಡ ಸ್ಥಳಕ್ಕೆ ಶೀಘ್ರ ಭೇಟಿ ನೀಡಲಿದ್ದು, ೨೪ ಗಂಟೆಗಳೊಳಗೆ ವರದಿ ಸಲ್ಲಿಸಲಿದೆ.

SCROLL FOR NEXT