ರಾಹುಲ್ ಗಾಂಧಿ 
ದೇಶ

ಉದ್ಯಮಿಗಳಿಗೆ ತೆರಿಗೆ ಕಡಿತಗೊಳಿಸುವ ಬದಲು ಬಡವರಿಗೆ ಹಣ ನೀಡಿ: ರಾಹುಲ್ ಗಾಂಧಿ

ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಉದ್ಯಮಿಗಳ ತೆರಿಗೆ ಕಡಿತಗೊಳಿಸುವ ಬದಲು ಬಡವರಿಗೆ ಹಣ ನೀಡಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ

ನವದೆಹಲಿ: ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಉದ್ಯಮಿಗಳ ತೆರಿಗೆ ಕಡಿತಗೊಳಿಸುವ ಬದಲು ಬಡವರಿಗೆ ಹಣ ನೀಡಿ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಗೊಂದಲದ ಹೇಳಿಕೆ ನೀಡುವುದರಿಂದ ಆರ್ಥಿಕ ವಿಪತ್ತು ಕಣ್ಮರೆಯಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಆರ್ಥಿಕತೆಯ ಬೇಡಿಕೆ ಸರಿಪಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಮತ್ತು ಈ ವರ್ಷದಲ್ಲಿ ಒಟ್ಟು ಬೇಡಿಕೆಯ ಮೌಲ್ಯಮಾಪನದ ಆಘಾತ ತೀವ್ರವಾಗಿದೆ ಎಂದು ಸೂಚಿಸುತ್ತದೆ ಎಂದು ಮಂಗಳವಾರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದ ಬೆನ್ನಲ್ಲೇ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಹಲವು ತಿಂಗಳುಗಳಿಂದ ನೀಡುತ್ತಿದ್ದ ಎಚ್ಚರಕೆಯನ್ನು ಆರ್ ಬಿ ಐ ಈಗ ದೃಢಪಡಿಸಿದೆ, ಬಡವರಿಗೆ ಹಣವನ್ನು ನೀಡಿ, ಕೈಗಾರಿಕೋದ್ಯಮಿಗಳಿಗೆ ತೆರಿಗೆ ಕಡಿತ ಮಾಡಬೇಡಿ. ಬಳಕೆ ಮಾಡುವುದರ ಮೂಲಕ ಆರ್ಥಿಕತೆಯನ್ನು ಪುನರಾರಂಭಿಸಿ ಎಂದು  ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.ನಷ್ಟವನ್ನು ಮರಳಿ ಪಡೆಯಲು ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯು ಹಾದಿಗೆ ಮರಳಲು ವ್ಯಾಪಕವಾದ "ಸುಧಾರಣೆಗಳು ಅಗತ್ಯವಿದೆ ಎಂದು ಆರ್ ಬಿ ಐ ಹೇಳಿತ್ತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ