ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿ ದಾಖಲೆ ಬರೆದ ಕೊರೋನಾ ಸೋಂಕು, ಒಂದೇ ದಿನ 2476 ಹೊಸ ಸೋಂಕು ಪ್ರಕರಣಗಳು ದಾಖಲು!

ಮಾರಕ ಕೊರೋನಾ ಸೋಂಕು ಕೇರಳದಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನುವಾಗಲೇ ಮತ್ತೆ ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಇಂದು ಹೊಸ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ.

ಕೊಚ್ಚಿ: ಮಾರಕ ಕೊರೋನಾ ಸೋಂಕು ಕೇರಳದಲ್ಲಿ ಸಂಪೂರ್ಣ ನಿಯಂತ್ರಣದಲ್ಲಿದೆ ಎನ್ನುವಾಗಲೇ ಮತ್ತೆ ಸೋಂಕು ತನ್ನ ಆರ್ಭಟ ಮುಂದುವರೆಸಿದ್ದು, ಇಂದು ಹೊಸ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಬರೆದಿದೆ.

ಹೌದು.. ಕೇರಳದಲ್ಲಿ ಇಂದು ಒಂದೇ ದಿನ 2476 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದು ಕೇರಳದಲ್ಲಿ ದಾಖಲಾದ ಈವರೆಗಿನ ಒಂದು ದಿನದ ಗರಿಷ್ಟ ಸೋಂಕು ಪ್ರಕರಣಗಳಾಗಿವೆ. ಆ ಮೂಲಕ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 66,831ಕ್ಕೆ ಏರಿಕೆಯಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ  1351 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೇರಳದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 41, 694ಕ್ಕೆ ಏರಿಕೆಯಾಗಿದೆ. 

ಅಂತೆಯೇ ಕೇರಳದಲ್ಲಿ ಪ್ರಸ್ತುತ 22, 344 ಸಕ್ರಿಯ ಪ್ರಕರಣಗಳಿವೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ಒಟ್ಟು 13 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೇರಳದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ.

ಇನ್ನು ಇಂದು ಪತ್ತೆಯಾದ ಒಟ್ಟು 2476 ಹೊಸ ಸೋಂಕು ಪ್ರಕರಣಗಳ ಪೈಕಿ 2243 ಪ್ರಕರಣಗಳು ಸೋಂಕಿತರ ಸಂಪರ್ಕಕ್ಕೆ ಬಂದವರು ಎಂದು ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ