ಕೋವಿಡ್ ಮಧ್ಯೆ ನೀಟ್, ಜೆಇಇ ಪರೀಕ್ಷೆಗೆ ವಿರೋಧ: ದೇಶಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ
ಕೋವಿಡ್ ಬಿಕ್ಕಟ್ಟಿನ ನಡುವೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದೆ.
ನವದೆಹಲಿ: ಕೋವಿಡ್ ಬಿಕ್ಕಟ್ಟಿನ ನಡುವೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಗಳಿಗಾಗಿ ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ನಾಳೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದೆ.
ಕೇಂದ್ರಸರ್ಕಾರದ ಬುದ್ದಿಹೀನ ಮತ್ತು ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ ಹಾಗೂ ಜಿಲ್ಲಾ
ಕೇಂದ್ರಗಳಲ್ಲಿನ ಕೇಂದ್ರ ಸರ್ಕಾರದ ಮುಖ್ಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ
ಪರೀಕ್ಷೆ ನಡೆಸುವುದನ್ನು ತೀವ್ರವಾಗಿ ವಿರೋಧಿಸುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಹೇಳಿಕೆಯಲ್ಲಿ
ತಿಳಿಸಿದ್ದಾರೆ.
ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಒತ್ತಡವನ್ನುಂಟುಮಾಡಿದೆ. ಅಸ್ಸಾಂ ಮತ್ತು ಬಿಹಾರದಂತಹ ತೀವ್ರ ಪ್ರವಾಹ ಪರಿಸ್ಥಿತಿ ಉಲ್ಬಣಿಸಿರುವ ರಾಜ್ಯಗಳ ವಿದ್ಯಾರ್ಥಿಗಳಿಗೆ ಮತ್ತಷ್ಟು ಅನಾನುಕೂಲತೆಯಾಗಿದೆ ಎಂದು ವೇಣುಗೋಪಾಲ್ ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.