ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ

ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಿಎಂ ನರೇಂದ್ರ ಮೋದಿ
Sumana Upadhyaya
Updated On : 27 Aug 2020, 11:12 am

ನವದೆಹಲಿ: ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್ ನಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸುವುದಕ್ಕೆ ವಿರೋಧ ಕೇಳಿಬರುತ್ತಿರುವುದರ ಮಧ್ಯೆ ಶಿಕ್ಷಣ ತಜ್ಞರು ಈ ಪತ್ರ ಬರೆದಿದ್ದು, ತಮ್ಮ ರಾಜಕೀಯ ಹಿತಾಸಕ್ತಿಯಿಂದ ಕೆಲವರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಂದಿನ ಯುವಕರು ಮತ್ತು ವಿದ್ಯಾರ್ಥಿಗಳು ದೇಶದ ಭವಿಷ್ಯ ಆಗಿದ್ದು ಕೋವಿಡ್ 19 ಸಾಂಕ್ರಾಮಿಕ ವೈರಸ್ ನ ನಡುವೆ ಅವರ ಭವಿಷ್ಯ, ವೃತ್ತಿಯ ಬಗ್ಗೆ ಅನಿಶ್ಚಿತತೆ ಉಂಟಾಗಿದೆ. ಈ ವರ್ಷದ ಶೈಕ್ಷಣಿಕ ಸಾಲಿನ ಪ್ರವೇಶ ಮತ್ತು ತರಗತಿಗಳ ಬಗ್ಗೆ ಸಾಕಷ್ಟು ಅನುಮಾನಗಳು ಎದ್ದಿರುವಾಗ ಅವುಗಳನ್ನು ಆದಷ್ಟು ಬೇಗನೆ ಬಗೆಹರಿಸಿಕೊಳ್ಳಬೇಕಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Advertisement

Advertisement

ಪ್ರತಿವರ್ಷದಂತೆ ಈ ವರ್ಷ ಕೂಡ ಲಕ್ಷಾಂತರ ವಿದ್ಯಾರ್ಥಿಗಳು 12ನೇ ತರಗತಿ ಮುಗಿಸಿ ಮುಂದಿನ ಭವಿಷ್ಯವನ್ನು ರೂಪಿಸಲು ಕಾಯುತ್ತಿದ್ದಾರೆ. ಸರ್ಕಾರ ಈಗಾಗಲೇ ಜೆಇಇ ಮತ್ತು ನೀಟ್ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿ ಸಿದ್ದತೆ ಮಾಡಿಕೊಂಡಿದೆ.

ಹೀಗಿರುವಾಗ ಮತ್ತಷ್ಟು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಅಮೂಲ್ಯ ಒಂದು ವರ್ಷ ಹಾಳಾಗುತ್ತದೆ. ಯುವಜನತೆ, ವಿದ್ಯಾರ್ಥಿಗಳ ಕನಸಿನ ಜೊತೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದರೂ ಕೆಲವರು ತಮ್ಮ ರಾಜಕೀಯ ಲಾಭಕ್ಕಾಗಿ ಸರ್ಕಾರವನ್ನು ವಿರೋಧಿಸಲು ಪರೀಕ್ಷೆ ಮಾಡಬಾರದೆಂದು ವಿರೋಧಿಸಿ ಚೆಲ್ಲಾಟವಾಡುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments