ಸಂಗ್ರಹ ಚಿತ್ರ 
ದೇಶ

ಪಂಜಾಬ್ ಶಾಸಕರಿಗೆ ಕೊರೋನಾ ಸೋಂಕು, ಸಿಎಂ ಅಮರೀಂದರ್ ಸಿಂಗ್ ಗೆ ಹೋಮ್ ಕ್ವಾರಂಟೈನ್!

ಪಂಜಾಬ್ ಶಾಸಕರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರ ಸಂಪರ್ಕಕ್ಕೆ ಬಂದ ಕಾರಣ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ.

ಅಮೃತಸರ: ಪಂಜಾಬ್ ಶಾಸಕರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರ ಸಂಪರ್ಕಕ್ಕೆ ಬಂದ ಕಾರಣ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ.

ಪಂಜಾಬ್ ವಿಧಾನಸಭೆಯಲ್ಲಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಭೇಟಿ ಮಾಡಿದ್ದ ಶಾಸಕರ ಪೈಕಿ ಇಬ್ಬರು ಶಾಸಕರ ಕೋವಿಡ್ ಪರೀಕ್ಷೆ ಪಾಸಿಟಿವ್ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ವೈದ್ಯರು ಅಮರೀಂದರ್ ಸಿಂಗ್ ಅವರನ್ನು ಹೋಮ್ ಐಸೋಲೇಷನ್ ನಲ್ಲಿ ಇರುವಂತೆ ಸಲಹೆ  ನೀಡಿದ್ದಾರೆ. 

ಹೀಗಾಗಿ ಅಮರೀಂದರ್ ಸಿಂಗ್ ಅವರು 7 ದಿನ ಸ್ವಯಂ ಗೃಹ ಬಂಧನದಲ್ಲಿದ್ದಾರೆ ಎಂದು ಪಂಜಾಬ್ ಸರ್ಕಾರದ ಮಾಧ್ಯಮ ಸಲಹೆಗಾರರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಪಂಜಾಬ್ ನ 23 ಶಾಸಕರು ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಇದೇ ಕಾರಣಕ್ಕೆ ಇದೀಗ ರಾಜ್ಯದಲ್ಲಿರುವ ಎಲ್ಲ ಶಾಸಕರನ್ನೂ ಕೋವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದೆ. ಪಂಜಾಬ್ ನಲ್ಲಿ ಒಟ್ಟು 117 ಶಾಸಕರಿದ್ದು, ಈ ಪೈಕಿ 23 ಮಂದಿ ಶಾಸಕರು ಸೋಂಕಿಗೆ ತುತ್ತಾಗಿದ್ದಾರೆ. ಪಂಜಾಬ್  ನಲ್ಲಿ ಶಾಸಕರು ಮಾತ್ರವಲ್ಲದೇ ಸಚಿವರೂ ಕೂಡ ಸೋಂಕಿಗೆ ತುತ್ತಾಗಿದ್ದು, ಗ್ರಾಮೀಣಾಭಿವದ್ಧಿ ಸಚಿವ ಟ್ರಿಪ್ಟ್ ರಾಜಿಂದರ್ ಬಜ್ವಾ ಅವರು ಸೋಂಕಿಗೆ ತುತ್ತಾದ ಮೊದಲ ಸಚಿವರಾಗಿದ್ದಾರೆ. ಬಳಿಕ ಸಹಕಾರ ಸಚಿವ ಸುಖ್ಜಿಂದರ್ ಸಿಂಗ್ ರಾಂಧವ, ಕಂದಾಯ ಸಚಿವ ಗುರುಪ್ರೀತ್ ಕಂಗಾರ್ ಮತ್ತು ಕೈಗಾರಿಕಾ ಸಚಿವ  ಶಾಮ್ ಸುಂದರ್ ಅರೋರಾ ಅವರು ಸೋಂಕಿಗೆ ತುತ್ತಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!