ಪಿ ಚಿದಂಬರಂ 
ದೇಶ

ಕೊರೋನಾ ಪೂರ್ವ ಅಸಮರ್ಪಕ ಆರ್ಥಿಕತೆಯನ್ನು ದೇವರ ಸಂದೇಶವಾಹಕಿಯಾಗಿ ಹೇಗೆ ವಿವರಿಸುವಿರಿ: ನಿರ್ಮಲಾ ಸೀತಾರಾಮನ್ ಗೆ ಪಿ ಚಿದಂಬರಂ ಪ್ರಶ್ನೆ

ಕೊರೋನಾ ಲಾಕ್ಡೌನ್ ಮತ್ತು ದೇಶದ ಆರ್ಥಿಕತೆ ಕುಸಿಯುತ್ತಿರುವುದು ದೇವರ ಆಟ ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ವ್ಯಂಗ ಮಾಡಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ದೇವರ ಸಂದೇಶಗಾರ್ತಿಯಾಗಿ ನಿರ್ಮಲಾ ಸೀತಾರಾಮನ್ ಅವರು ಕೊರೋನಾಕ್ಕಿಂತ ಮೊದಲು ಆರ್ಥಿಕತೆಯ ಅಸಮರ್ಪಕ ನಿರ್ವಹಣೆ ಹೇಗಾಯಿತು ಎಂದು ಹೇಳಬಹುದೇ ಎಂದು ಕೇಳಿದ್ದಾರೆ.

ನವದೆಹಲಿ: ಕೊರೋನಾ ಲಾಕ್ಡೌನ್ ಮತ್ತು ದೇಶದ ಆರ್ಥಿಕತೆ ಕುಸಿಯುತ್ತಿರುವುದು ದೇವರ ಆಟ ಎಂದು ಹೇಳಿಕೆ ನೀಡಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ವ್ಯಂಗ ಮಾಡಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ದೇವರ ಸಂದೇಶಗಾರ್ತಿಯಾಗಿ ನಿರ್ಮಲಾ ಸೀತಾರಾಮನ್ ಅವರು ಕೊರೋನಾಕ್ಕಿಂತ ಮೊದಲು ಆರ್ಥಿಕತೆಯ ಅಸಮರ್ಪಕ ನಿರ್ವಹಣೆ ಹೇಗಾಯಿತು ಎಂದು ಹೇಳಬಹುದೇ ಎಂದು ಕೇಳಿದ್ದಾರೆ.

ಕೊರೋನಾ ಸಾಂಕ್ರಾಮಿಕ ದೇವರ ಆಟವಾದರೆ ಸತತ ಮೂರು ವರ್ಷಗಳಿಂದ ಆರ್ಥಿಕತೆ ಕುಸಿಯುತ್ತಾ ಬಂದಿದೆ, ಅದು ಹೇಗಾಯಿತು, ಸಾಂಕ್ರಾಮಿಕ ಹರಡುವುದಕ್ಕಿಂತ ಮೊದಲು ದೇಶಕ್ಕೆ ಏನಾಗಿತ್ತು, ದೇವರ ಸಂದೇಶವಾಹಕರಾಗಿ ಹಣಕಾಸು ಸಚಿವೆ ಇದಕ್ಕೆ ಉತ್ತರಿಸಬಲ್ಲರೇ ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಜಿಎಸ್ ಟಿ ಬಾಕಿ ಉಳಿಕೆಯಿಂದ ಆಗಿರುವ ನಷ್ಟವನ್ನು ಭರಿಸಲು ರಾಜ್ಯ ಸರ್ಕಾರದ ಬಳಿ ಸಾಲ ಕೇಳುವ ಕೇಂದ್ರ ಸರ್ಕಾರದ ನಡೆಯನ್ನು ಕೂಡ ಚಿದಂಬರಂ ಟೀಕಿಸಿದ್ದಾರೆ. ಹಣಕಾಸು ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಲು ನೋಡುತ್ತಿದೆ. ಇದು ಜನತೆಗೆ ಕೇಂದ್ರ ಸರ್ಕಾರ ಮಾಡುತ್ತಿರುವ ದ್ರೋಹವಾಗಿದ್ದು ಕಾನೂನಿನ ನೇರ ಉಲ್ಲಂಘನೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್