ಕೆ ಸುಧಾಕರ್ 
ದೇಶ

ಡ್ರಗ್ ಮಾಫಿಯಾದಿಂದ ಸರ್ಕಾರ ಬುಡಮೇಲು ಹೇಳಿಕೆ: ಪುರಾವೆ ಒದಗಿಸಲು ಸಚಿವ ಡಾ.ಕೆ.ಸುಧಾಕರ್ ಆಗ್ರಹ

ಡ್ರಗ್ ಮಾಫಿಯಾ ಹಣ ನಮ್ಮ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ.

ಬೆಂಗಳೂರು: ಡ್ರಗ್ ಮಾಫಿಯಾ ಹಣ ನಮ್ಮ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ. ಆದರೆ ನೀವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲೆಸೆದಿದ್ದಾರೆ.

ಡ್ರಗ್ ಮಾಫಿಯಾದಿಂದ ತಮ್ಮ ಸರ್ಕಾರ ಬುಡಮೇಲಾಯಿತು ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, "ನಾನು ಯಾವ ಮುಂಬೈಗೂ ಹೋಗಿಲ್ಲ. ಮಾಜಿ ಮುಖ್ಯಮಂತ್ರಿಗಳಾಗಿ ಇಂತಹ ಗಂಭೀರ ಆರೋಪ ಮಾಡಬಾರದು. ಆರೋಪ ಮಾಡಿದರೆ ಅದಕ್ಕೆ ಪುರಾವೆಯನ್ನೂ ನೀಡಬೇಕು. ಬಿಜೆಪಿ ಅಂತಹ ಅನೈತಿಕ ಕೆಲಸವನ್ನೂ ಎಂದೂ ಮಾಡಿಲ್ಲ. ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ. ತಾವು ತಲೆ ಕೆಡಿಸಿಕೊಳ್ಳುವ ಅಗತ್ಯವೇನಿದೆ?" ಎಂದು ಪ್ರಶ್ನಿಸಿದ್ದಾರೆ.

"ನಾನು ಮಾಜಿ ಮುಖ್ಯಮಂತ್ರಿ, ಪ್ರಧಾನಮಂತ್ರಿಯ ಮಗನಲ್ಲ. ಶಾಲಾ ಶಿಕ್ಷಕನ ಮಗನಾಗಿ ಸ್ವಸಾಮರ್ಥ್ಯದಿಂದ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ನಾನೆಂದೂ ಯಾರ ಹೆಸರಿನಲ್ಲೂ ರಾಜಕೀಯ ಮಾಡಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸಚಿವರು ಸರಣಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)

ರಾಯಲಸೀಮೆ ವಿಸ್ಮಯ; ನೀರಿಲ್ಲದೇ ಗಣಪನ ವಿಸರ್ಜನೆ, ನದಿ ತಟದಲ್ಲಿ ಮೂರ್ತಿಗಳು ಅನಾಥ; ಕೊನೆಗೂ ಸುರಿದ ಮಳೆರಾಯ, Video